ಬೆಂಗಳೂರು : ಕೇಂದ್ರ ಸರ್ಕಾರದ ಅಧೀನದಲ್ಲಿರುವ ರೈಲ್ ವಿಕಾಸ್ ನಿಗಮ್ ಲಿಮಿಟೆಡ್ (RVNL Recruitment 2026) ಸಂಸ್ಥೆಯಲ್ಲಿ ಖಾಲಿ ಇರುವ 6 ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. 6 ಡೆಪ್ಯೂಟಿ ಜನರಲ್ ಮ್ಯಾನೇಜರ್ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಅಭ್ಯರ್ಥಿಗಳು ಇ-ಮೇಲ್ ಮೂಲಕ ಅರ್ಜಿಯನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ. ಕರ್ನಾಟಕದ ಬೆಂಗಳೂರು, ಧಾರವಾಡದಲ್ಲೂ ನೇಮಕಾತಿ ನಡೆಯುತ್ತಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ರೈಲ್ ವಿಕಾಸ್ ನಿಗಮ್ ಲಿಮಿಟೆಡ್
ಹುದ್ದೆ ಹೆಸರು: ಸೀನಿಯರ್ ಡೆಪ್ಯೂಟಿ ಜನರಲ್ ಮ್ಯಾನೇಜರ್
ಒಟ್ಟು ಹುದ್ದೆ: 6
ಉದ್ಯೋಗ ಸ್ಥಳ: ಬೆಂಗಳೂರು, ಧಾರವಾಡ
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಜುಲೈ 7
ಕರ್ನಾಟಕದ ಬೆಂಗಳೂರು, ಧಾರವಾಡ, ಉತ್ತರ ಪ್ರದೇಶದ ವಾರಾಣಸಿ, ಪಶ್ಚಿಮ ಬಂಗಾಳದ ಕೋಲ್ಕತ್ತ ಸೇರಿ ಹಲವೆಡೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯದಲ್ಲಿ ಸಿವಿಲ್ ಎಂಜಿನಿಯರಿಂಗ್ ವಿಭಾಗದಲ್ಲಿ ಬಿ.ಇ ಅಥವಾ ಬಿ.ಟೆಕ್ ಕೋರ್ಸ್ ಮುಗಿಸಿದವರು ಅರ್ಜಿಗಳನ್ನು ಸಲ್ಲಿಸಬಹುದು. ಅರ್ಜಿ ಸಲ್ಲಿಸುವವರಿಗೆ ಗರಿಷ್ಠ 57 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
ಅರ್ಜಿ ಸಲ್ಲಿಸುವವರಿಗೆ ಯಾವುದೇ ಶುಲ್ಕವನ್ನು ನಿಗದಿಪಡಿಸಿಲ್ಲ. ಸಲ್ಲಿಕೆಯಾದ ಅರ್ಜಿಗಳನ್ನು ಮೊದಲು ಪರಿಶೀಲನೆ ಮಾಡಲಾಗುತ್ತದೆ. ಅರ್ಜಿಗಳನ್ನು ಪರಿಶೀಲನೆ ಮಾಡಿದ ಬಳಿಕ ಸಂದರ್ಶನಕ್ಕೆ ಆಹ್ವಾನಿಸಲಾಗುತ್ತದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 80 ಸಾವಿರ ರೂಪಾಯಿಯಿಂದ 2.2 ಲಕ್ಷ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ.
ಅರ್ಜಿ ಸಲ್ಲಿಸಲು ಬಯಸುವವರು ಮೊದಲಿಗೆ rvnl.org ವೆಬ್ ಸೈಟ್ ಗೆ ಭೇಟಿ ನೀಡಬೇಕು. ಜನರಲ್ ಮ್ಯಾನೇಜರ್ ಹುದ್ದೆಯ ಅಧಿಸೂಚನೆ ಓದಿಕೊಳ್ಳಬೇಕು. ಅರ್ಜಿಯ ಪ್ರಿಂಟೌಟ್ ತೆಗೆದುಕೊಂಡು ಭರ್ತಿ ಮಾಡಬೇಕು. ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ rvnl.deputation@rvnl.orgಗೆ ಮೇಲ್ ಮಾಡಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಇದನ್ನೂ ಓದಿ : ಕೇಂದ್ರ ಸರ್ಕಾರದ ನ್ಯಾಷನಲ್ ಏರೋಸ್ಪೇಸ್ ಲ್ಯಾಬೊರೇಟರೀಸ್ ಸಂಸ್ಥೆಯಲ್ಲಿ 48 ಹುದ್ದೆಗಳ ನೇಮಕಾತಿ!


















