ಬೆಂಗಳೂರು : ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ವಿದೇಶಾಂಗ ವ್ಯವಹಾರಗಳ ಸಚಿವಾಲಯದಲ್ಲಿ (Ministry of External Affairs Recruitment 2026) ಖಾಲಿ ಇರುವ 3 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. 3 ಅಧೀನ ಕಾರ್ಯದರ್ಶಿ, ಡೆಪ್ಯೂಟಿ ಕಾರ್ಯದರ್ಶಿ ಹಾಗೂ ನಿರ್ದೇಶಕ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅರ್ಹ ಹಾಗೂ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಆಫ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ನೇಮಕಾತಿಯ ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ವಿದೇಶಾಂಗ ವ್ಯವಹಾರಗಳ ಸಚಿವಾಲಯ
ಒಟ್ಟು ಹುದ್ದೆಗಳು: 3
ಹುದ್ದೆಯ ಹೆಸರು: ಅಧೀನ ಕಾರ್ಯದರ್ಶಿ ಇತ್ಯಾದಿ
ಅರ್ಜಿ ಸಲ್ಲಿಕೆ ವಿಧಾನ: ಆಫ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ಜುಲೈ 15
ನವದೆಹಲಿಯಲ್ಲಿರುವ ಸಚಿವಾಲಯದಲ್ಲಿ ಕೆಲಸ ಮಾಡಲು ಇಚ್ಛಿಸುವವರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವವರಿಗೆ ಗರಿಷ್ಠ 56 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. ಸಲ್ಲಿಕೆಯಾದ ಅರ್ಜಿಗಳನ್ನು ಮೊದಲು ಪರಿಶೀಲನೆ ಮಾಡಲಾಗುತ್ತದೆ. ಇದಾದ ಬಳಿಕ ಸಂದರ್ಶನಕ್ಕೆ ಆಹ್ವಾನಿಸಿ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸಲು ಯಾವುದೇ ಶುಲ್ಕ ಇರುವುದಿಲ್ಲ.
ಅರ್ಜಿ ಸಲ್ಲಿಸಲು ಬಯಸುವವರು ಮೊದಲಿಗೆ mea.gov.in ವೆಬ್ ಸೈಟ್ ಗೆ ಭೇಟಿ ನೀಡಬೇಕು. ನೇಮಕಾತಿಗೆ ಸಂಬಂಧಿಸಿದ ಅಧಿಸೂಚನೆ ಓದಿಕೊಂಡು ಅರ್ಜಿಯ ಪ್ರಿಂಟೌಟ್ ತೆಗೆದುಕೊಳ್ಳಬೇಕು. ಭರ್ತಿ ಮಾಡಿದ ಅರ್ಜಿಯನ್ನು ಈ ಕೆಳಗಿನ ವಿಳಾಸಕ್ಕೆ ಪೋಸ್ಟ್ ಮಾಡಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಅರ್ಜಿ ಸಲ್ಲಿಸಬೇಕಾದ ವಿಳಾಸ
Administrative Officer(PA-III), Ministry of External Affairs, Room No. 4093, Jawahar Lal Nehru Bhawan, New Delhi-110011.
ಇದನ್ನೂ ಓದಿ : ಟೆಸ್ಟ್ ಪದಾರ್ಪಣೆಯ ಹೊಸ್ತಿಲಲ್ಲಿ ಜೋರ್ಡಾನ್ ಕಾಕ್ ಜೊತೆ ಕೊಹ್ಲಿ : ಲಂಡನ್‌ನಲ್ಲಿ ವಿಶೇಷ ಭೇಟಿ!


















