ದಾವಣಗೆರೆ : ಜಿಲ್ಲೆಯ ಚನ್ನಗಿರಿ ತಾಲೂಕಿನ ಚನ್ನೇಶಪುರ ಗ್ರಾಮದ ಸಮೀಪ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕಾರು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಹರಿಹರ ತಾಲೂಕಿನ ಬನ್ನಿಕೋಡು ಗ್ರಾಮದ ನಿವಾಸಿ ಆನಂದ್ (29) ಮೃತಪಟ್ಟ ದುರ್ದೈವಿ ಎಂದು ಗುರುತಿಸಲಾಗಿದೆ.
ಅಪಘಾತದ ವೇಳೆ ಕಾರಿನಲ್ಲಿ ಆನಂದ್ ಹಾಗೂ ಮಂಜುನಾಥ್ ಪ್ರಯಾಣಿಸುತ್ತಿದ್ದರು. ಮಾಹಿತಿಯ ಪ್ರಕಾರ, ಇಬ್ಬರೂ ಸಂಬಂಧಿಕರ ಮನೆಗೆ ತೆರಳಿ ತಮ್ಮ ಸ್ವಂತ ಊರಾದ ಬನ್ನಿಕೋಡು ಗ್ರಾಮಕ್ಕೆ ವಾಪಸ್ ಬರುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ.
ಕಾರು ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಆನಂದ್ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಅಪಘಾತದಲ್ಲಿ ಗಾಯಗೊಂಡಿರುವ ಮಂಜುನಾಥ್ ಅವರನ್ನು ತಕ್ಷಣ ಚಿಕಿತ್ಸೆಗಾಗಿ ದಾವಣಗೆರೆ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರಿದಿದೆ. ಘಟನೆ ಸಂಬಂಧ ಚನ್ನಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಇದನ್ನೂ ಓದಿ : ಮೇಲ್ಮನೆ ಆಟದಲ್ಲಿ ಸಿಎಂ ಡಿಕೆಶಿ ಮಾಸ್ಟರ್ ಮೈಂಡ್ ಗೇಮ್ : ಕಾಂಗ್ರೆಸ್‌ಗೆ 5ಕ್ಕೆ 5 ಕ್ಲೀನ್ ಸ್ವೀಪ್!



















