ಬೆಂಗಳೂರು : ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ ಸಂಸ್ಥೆಯಲ್ಲಿ (MRPL Recruitment 2026) ಖಾಲಿ ಇರುವ 5 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. 5 ಫೈರ್ ಆಫೀಸರ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅರ್ಹ ಹಾಗೂ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್
ಹುದ್ದೆಗಳ ಹೆಸರು: ಫೈರ್ ಆಫೀಸರ್
ಒಟ್ಟು ಹುದ್ದೆಗಳು: 5
ಉದ್ಯೋಗ ಸ್ಥಳ: ಮಂಗಳೂರು
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಜುಲೈ 16
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಫೈರ್ ಅಥವಾ ಫೈರ್ ಸೇಫ್ಟಿ ವಿಭಾಗದಲ್ಲಿ ಬಿ.ಇ, ಬಿ.ಟೆಕ್ ಕೋರ್ಸ್ ಗಳನ್ನು ಮುಗಿಸಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಅರ್ಜಿ ಸಲ್ಲಿಸುವವರಿಗೆ ಗರಿಷ್ಠ 50 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ನೇಮಕಾತಿ ಹೊಂದಿದವರಿಗೆ ವಾರ್ಷಿಕ 13-14 ಲಕ್ಷ ರೂಪಾಯಿ ಸಂಬಳದ ಪ್ಯಾಕೇಜ್ ನೀಡಲಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ?
ಮೊದಲಿಗೆ ಅಧಿಕೃತ ವೆಬ್ ಸೈಟ್ ಆಗಿರುವ mrpl.co.in ಗೆ ಭೇಟಿ ನೀಡಬೇಕು
ನಿಮಗೆ ಬೇಕಾದ ಹುದ್ದೆಯ ಅಧಿಸೂಚನೆಯನ್ನು ಓದಬೇಕು
ಆನ್ ಲೈನ್ ಅರ್ಜಿ ನಮೂನೆಯ ಲಿಂಕ್ ತೆರೆಯಬೇಕು
ಅರ್ಜಿಯನ್ನು ಯಾವುದೇ ತಪ್ಪುಗಳಿಲ್ಲದ ರೀತಿ ಭರ್ತಿ ಮಾಡಿ, ಸಲ್ಲಿಸಬೇಕು
ಫ್ಯೂಚರ್ ರೆಫರೆನ್ಸಿಗಾಗಿ ಅರ್ಜಿ ನಮೂನೆಯ ಪ್ರಿಂಟೌಟ್ ತೆಗೆದುಕೊಳ್ಳಬೇಕು
ಇದನ್ನೂ ಓದಿ : ‘ಉಘೇ ಉಘೇ ಮಾಯ್ಕಾರ’ ಆಲ್ಬಂ ಸಾಂಗ್ ಮೆರವಣಿಗೆ!



















