ಬೆಂಗಳೂರು : ಕರ್ನಾಟಕ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ ಖಾಲಿ ಇರುವ ಹಲವು ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಹಲವು ಸೀನಿಯರ್ ಮೈಕ್ರೋಬಯಾಲಜಿಸ್ಟ್ ಹುದ್ದೆಗಳನ್ನು (RDWSD Shivamogga Recruitment 2026) ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅರ್ಹ ಹಾಗೂ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ನೇಮಕಾತಿಗೆ ಸಂಬಂಧಿಸಿದ ಹೆಚ್ಚಿನ ವಿವರ ಈ ಕೆಳಗಿನಂತಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ
ಒಟ್ಟು ಹುದ್ದೆಗಳು: ವಿವಿಧ
ಹುದ್ದೆಗಳ ಹೆಸರು: ಸೀನಿಯರ್ ಮೈಕ್ರೋಬಯಾಲಜಿಸ್ಟ್
ಉದ್ಯೋಗ ಸ್ಥಳ: ಶಿವಮೊಗ್ಗ
ಅರ್ಜಿ ಸಲ್ಲಿಸಲು ಕೊನೆಯ ದಿನ: ಜೂನ್ 30
ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಬಿಎಸ್ಸಿ ಅಥವಾ ಎಂಎಸ್ಸಿ ಕೋರ್ಸ್ ಮುಗಿಸಿದವರು ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ. ಅರ್ಜಿ ಸಲ್ಲಿಸುವವರಿಗೆ ಗರಿಷ್ಠ 45 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. ಅರ್ಜಿ ಸಲ್ಲಿಸಲು ಯಾವುದೇ ಶುಲ್ಕವನ್ನು ಇರುವುದಿಲ್ಲ. ಸಲ್ಲಿಕೆಯಾದ ಅರ್ಜಿಗಳನ್ನು ಮೊದಲು ಪರಿಶೀಲನೆ ಮಾಡಲಾಗುತ್ತದೆ. ಇದಾದ ಬಳಿಕ ಸಂದರ್ಶನಕ್ಕೆ ಆಹ್ವಾನಿಸಿ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 31 ಸಾವಿರ ರೂಪಾಯಿ ಸಂಬಳ ನೀಡಲಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ?
ಮೊದಲಿಗೆ shivamogga.nic.in ವೆಬ್ ಸೈಟ್ ಗೆ ಭೇಟಿ ನೀಡಬೇಕು
ನಿಮಗೆ ಬೇಕಾದ ಹುದ್ದೆ ಆಯ್ಕೆ ಮಾಡಿಕೊಳ್ಳಬೇಕು
ಅರ್ಜಿ ಸಲ್ಲಿಕೆ ಕುರಿತ ಅಧಿಸೂಚನೆ ಓದಿಕೊಳ್ಳಬೇಕು
ಅರ್ಜಿ ನಮೂನೆಯನ್ನು ಭರ್ತಿ ಮಾಡಬೇಕು
ಅಗತ್ಯ ದಾಖಲೆಗಳನ್ನು ಅಪ್ ಲೋಡ್ ಮಾಡಬೇಕು
ಫ್ಯೂಚರ್ ರೆಫರೆನ್ಸಿಗಾಗಿ ಅರ್ಜಿಯನ್ನು ಡೌನ್ ಲೋಡ್ ಮಾಡಿಟ್ಟುಕೊಂಡಿರಬೇಕು
ಇದನ್ನೂ ಓದಿ : ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ ಸಂಸ್ಥೆಯಲ್ಲಿ ನೇಮಕಾತಿ : ವರ್ಷಕ್ಕೆ 14 ಲಕ್ಷ ರೂ. ಪ್ಯಾಕೇಜ್



















