ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಹಲವೆಡೆ ಇಂದು ಮೋಡ ಕವಿದ ವಾತಾವರಣ ಕಂಡುಬಂದಿದ್ದು, ಮುಂದಿನ ಮೂರು ಗಂಟೆಗಳಲ್ಲಿ ಭಾರಿ ಮಳೆಯ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಎಲ್ಲೋ ಅಲರ್ಟ್ ಘೋಷಿಸಿದೆ.
ಬೆಂಗಳೂರುರಲ್ಲಿ ಬೆಳಗ್ಗೆಯಿಂದಲೇ ಮೋಡ ಕವಿದ ವಾತಾವರಣ ಕಂಡುಬಂದಿದ್ದು, ಕೆಲವೆಡೆ ತುಂತುರು ಮಳೆಯೂ ದಾಖಲಾಗಿದೆ. ಮುಂಜಾಗ್ರತಾ ಕ್ರಮವಾಗಿ ನಗರದಲ್ಲಿ ಎಚ್ಚರಿಕೆ ವಾತಾವರಣ ನಿರ್ಮಾಣವಾಗಿದೆ.
ಹವಾಮಾನ ಇಲಾಖೆಯ ಮಾಹಿತಿ ಪ್ರಕಾರ, ಬೆಂಗಳೂರು ನಗರ ಹಾಗೂ ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ ಮತ್ತು ಚಾಮರಾಜನಗರ ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ ಘೋಷಿಸಲಾಗಿದೆ.
ಕೋಲಾರ, ಚಿಕ್ಮಕಮಗಳೂರು, ರಾಮನಗರತ್ತು ಚಾಮರಾಜನಗರ ಸೇರಿದಂತೆ ಹಲವೆಡೆ ಗಾಳಿ ಸಹಿತ ಭಾರಿ ಮಳೆಯ ಸಾಧ್ಯತೆ ಇರುವುದಾಗಿ ಎಚ್ಚರಿಕೆ ನೀಡಲಾಗಿದೆ.
ಮುಂದಿನ ಕೆಲ ಗಂಟೆಗಳು ಪ್ರಮುಖವಾಗಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಅಗತ್ಯವಿಲ್ಲದ ಹೊರಗೆ ತೆರಳದೇ ಎಚ್ಚರಿಕೆಯಿಂದ ಇರಲು ಅಧಿಕಾರಿಗಳು ಮನವಿ ಮಾಡಿದ್ದಾರೆ.



















