ಬೆಂಗಳೂರು : ಕೇಂದ್ರ ಸರ್ಕಾರಿ ಸ್ವಾಮ್ಯದ, ಬೆಂಗಳೂರಿನ ರಕ್ಷಣಾ ಸಂಶೋಧನೆ ಹಾಗೂ ಅಭಿವೃದ್ಧಿ ಸಂಸ್ಥೆಯಲ್ಲಿ (DRDO LRDE Recruitment 2026) ಖಾಲಿ ಇರುವ 75 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. 75 ಪೇಯ್ಡ್ ಇಂಟರ್ನ್ ಶಿಪ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅರ್ಹ ಹಾಗೂ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಆಫ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ನೇಮಕಾತಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿ ಇಲ್ಲಿದೆ. ಇದು ಈಗಷ್ಟೇ ಎಂಜಿನಿಯರಿಂಗ್ ಮುಗಿಸಿದವರಿಗೆ ವೃತ್ತಿ ತರಬೇತಿ ಪಡೆಯಲು ಒಳ್ಳೆಯ ಅವಕಾಶವಾಗಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ರಕ್ಷಣಾ ಸಂಶೋಧನೆ ಹಾಗೂ ಅಭಿವೃದ್ಧಿ ಸಂಸ್ಥೆಯ LRDE
ಹುದ್ದೆ ಹೆಸರು: ಪೇಯ್ಡ್ ಇಂಟರ್ನ್ ಶಿಪ್
ಒಟ್ಟು ಹುದ್ದೆ: 75
ಉದ್ಯೋಗ ಸ್ಥಳ: ಬೆಂಗಳೂರು
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಜುಲೈ 1
ಡಿಆರ್ ಡಿಒದ ಎಲೆಕ್ಟ್ರಾನಿಕ್ಸ್ ಆ್ಯಂಡ್ ರೆಡಾರ್ ಡೆವಲಪ್ ಮೆಂಟ್ ಎಶ್ಟಾಬ್ಲಿಶ್ ಮೆಂಟ್ (LRDE) ಸಂಸ್ಥೆಯಲ್ಲಿ ನೇಮಕಾತಿ ನಡೆಯುತ್ತಿದೆ. ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯದಲ್ಲಿ ಬಿ.ಇ, ಬಿ.ಟೆಕ್, ಎಂ.ಇ, ಎಂ.ಟೆಕ್, ಎಂಎಸ್ಸಿ ಕೋರ್ಸ್ ಮುಗಿಸಿದವರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವವರಿಗೆ ಗರಿಷ್ಠ 28 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
ಅರ್ಜಿ ಸಲ್ಲಿಸಲು ಬಯಸುವವರು ಮೊದಲಿಗೆ drdo.gov.in ವೆಬ್ ಸೈಟ್ ಗೆ ಭೇಟಿ ನೀಡಬೇಕು. ಅರ್ಜಿಯ ಪ್ರಿಂಟೌಟ್ ತೆಗೆದುಕೊಂಡು ಭರ್ತಿ ಮಾಡಬೇಕು. ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ಈ ಕೆಳಗಿನ ವಿಳಾಸಕ್ಕೆ ನಿಗದಿತ ದಿನಾಂಕದೊಳಗೆ ಪೋಸ್ಟ್ ಮಾಡಬೇಕು. ನೇಮಕಾತಿ ಹೊಂದಿದವರಿಗೆ ಮಾಸಿಕ 5 ಸಾವಿರ ರೂ. ಸ್ಟೈಪೆಂಡ್ ನೀಡಲಾಗುತ್ತದೆ.
ಅರ್ಜಿ ಸಲ್ಲಿಸಬೇಕಾದ ವಿಳಾಸ
ನಿರ್ದೇಶಕರು, ಎಲೆಕ್ಟ್ರಾನಿಕ್ಸ್ ಆ್ಯಂಡ್ ರೆಡಾರ್ ಡೆವಲಪ್ ಮೆಂಟ್ ಎಸ್ಟಾಬ್ಲಿಷಶ್ ಮೆಂಟ್ (LRDE), ಡಿಫೆನ್ಸ್ ಆರ್ ಆ್ಯಂಡ್ ಡಿ ಆರ್ಗನೈಸೇಷನ್, ಸಿ.ವಿ. ರಾಮನ್ ನಗರ, ಬೆಂಗಳೂರು – 560093.


















