ಕುಂದಾಪುರ : ಬೈಂದೂರು ವಲಯದ ನಾಡದೋಣಿ ಮೀನುಗಾರರ ಸಂಘದ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ನೂತನ ಅಧ್ಯಕ್ಷರಾಗಿ ಬಿಎಚ್‌ಕೆ ಕುಮಾರ್ ಖಾರ್ವಿ ಅವರು ಆಯ್ಕೆಯಾಗಿದ್ದು, ಮೀನುಗಾರ ಸಮುದಾಯದಲ್ಲಿ ಸಂತಸ ಮನೆಮಾಡಿದೆ.
ಚುನಾವಣೆಯಲ್ಲಿ ಸದಸ್ಯರ ಬೆಂಬಲದೊಂದಿಗೆ ಅಧ್ಯಕ್ಷರಾಗಿ ಆಯ್ಕೆಯಾದ ಬಿಎಚ್‌ಕೆ ಕುಮಾರ್ ಖಾರ್ವಿ ಅವರಿಗೆ ಸಂಘದ ಪದಾಧಿಕಾರಿಗಳು ಹಾಗೂ ಸದಸ್ಯರು ಅಭಿನಂದನೆ ಸಲ್ಲಿಸಿ, ಹೊಸ ಜವಾಬ್ದಾರಿಯ ಯಶಸ್ವಿ ನಿರ್ವಹಣೆಗೆ ಶುಭ ಹಾರೈಸಿದ್ದಾರೆ.
ಅಧ್ಯಕ್ಷರಾಗಿ ಆಯ್ಕೆಯಾದ ಬಳಿಕ ಮಾತನಾಡಿದ ಬಿಎಚ್‌ಕೆ ಕುಮಾರ್ ಖಾರ್ವಿ ಅವರು, ಮೀನುಗಾರರು ಎದುರಿಸುತ್ತಿರುವ ಎಲ್ಲಾ ಸಮಸ್ಯೆಗಳ ಬಗ್ಗೆ ಸಂಪೂರ್ಣವಾಗಿ ಸ್ಪಂದಿಸುವುದಾಗಿ ತಿಳಿಸಿದ್ದಾರೆ. ಹಾಗೆಯೇ ಮೀನುಗಾರರ ಹಿತಾಸಕ್ತಿಯನ್ನು ಕಾಪಾಡುವುದು ಹಾಗೂ ಅವರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳುವುದು ತಮ್ಮ ಪ್ರಮುಖ ಆದ್ಯತೆಯಾಗಿರಲಿದೆ ಎಂದು ಹೇಳಿದ್ದಾರೆ.
ಜೊತೆಗೆ, ಮುಂದಿನ ದಿನಗಳಲ್ಲಿ ಸಂಘದ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗುವುದು. ಮೀನುಗಾರರ ಕಲ್ಯಾಣ, ಸಂಘದ ಬಲವರ್ಧನೆ ಹಾಗೂ ಸಮುದಾಯದ ಪ್ರಗತಿಗಾಗಿ ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸುವುದಾಗಿ ಬಿಎಚ್‌ಕೆ ಕುಮಾರ್ ಖಾರ್ವಿ ಅವರು ಭರವಸೆ ನೀಡಿದ್ದಾರೆ.
ಇದನ್ನೂ ಓದಿ : ಮೀನುಗಾರಿಕಾ ಸಂಶೋಧನೆ ಸಂಸ್ಥೆಯಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ : ಹೀಗೆ ಅರ್ಜಿ ಸಲ್ಲಿಸಿ


















