ಮೈಸೂರು: ಮೈಸೂರಲ್ಲಿ ಮತ್ತೆ ಅಗ್ನಿ ಅನಾಹುತ ಸಂಭವಿಸಿದ್ದು, ಕುವೆಂಪು ನಗರ ಜ್ಞಾನಗಂಗಾ ರಸ್ತೆಯಲ್ಲಿರುವ ಬಟ್ಟೆ ಅಂಗಡಿಯಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದೆ.
ಮಾಹಿತಿಯ ಪ್ರಕಾರ, ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡಿದ್ದು ಕ್ಷಣಾರ್ಧದಲ್ಲಿ ಅಂಗಡಿಯೊಳಗಿನ ಬಟ್ಟೆಗಳಿಗೆ ಹರಡಿದೆ. ಲಕ್ಷಾಂತರ ರೂಪಾಯಿ ಮೌಲ್ಯದ ಬಟ್ಟೆಗಳು ಬೆಂಕಿಗಾಹುತಿಯಾಗಿವೆ. ಘಟನೆ ಬಗ್ಗೆ ತಿಳಿದು ತಕ್ಷಣ ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ಧಾವಿಸಿ, ಬೆಂಕಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ. ತಕ್ಷಣದ ಕಾರ್ಯಾಚರಣೆಯಿಂದ ದೊಡ್ಡ ಅನಾಹುತ ತಪ್ಪಿದ್ದು, ಯಾವುದೇ ಜೀವಹಾನಿ ಸಂಭವಿಸಿಲ್ಲ.
ಸ್ಥಳೀಯ ಪೊಲೀಸರು ಕೂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಗ್ನಿ ಅವಘಡದ ನಿಖರ ಕಾರಣಗಳ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ. ಈ ಘಟನೆ ಹಿನ್ನೆಲೆಯಲ್ಲಿ ಪ್ರದೇಶದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.



















