ಬೆಂಗಳೂರು: ಎಂಬಿಎ, ಡಿಪ್ಲೋಮಾ ಕೋರ್ಸ್ ಮುಗಿಸಿ ಕೇಂದ್ರ ಸರ್ಕಾರದ ಹುದ್ದೆಗಳಿಗಾಗಿ ಕಾಯುತ್ತಿದ್ದೀರಾ? ನಿಮಗೊಂದು ಸುವರ್ಣಾವಕಾಶ ಇಲ್ಲಿದೆ. ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ Pawan Hans ಸಂಸ್ಥೆಯಲ್ಲಿ ಖಾಲಿ ಇರುವ 22 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಅಭ್ಯರ್ಥಿಗಳು ಆನ್ ಲೈನ್ ಅಥವಾ ಆಫ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ನೇಮಕಾತಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿ ಇಲ್ಲಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: Pawan Hans
ಹುದ್ದೆ ಹೆಸರು: ಜೂನಿಯರ್ ಎಂಜಿನಿಯರ್, ಅಸಿಸ್ಟಂಟ್
ಒಟ್ಟು ಹುದ್ದೆ: 22
ಉದ್ಯೋಗ ಸ್ಥಳ: ದೇಶಾದ್ಯಂತ
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಜುಲೈ 10
13 ಟ್ರೈನಿ ಟೆಕ್ನಿಶಿಯನ್, 2 ಸ್ಟೇಷನ್ ಇನ್ ಚಾರ್ಜ್, 2 ಅಸಿಸ್ಟಂಟ್, 2 ಕ್ವಾಲಿಟಿ ಅಸಿಸ್ಟಂಟ್ ಸೇರಿ ವಿವಿಧ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಿಂದ ಎಂಬಿಎ, ಸ್ನಾತಕೋತ್ತರ ಪದವಿ, ಡಿಪ್ಲೋಮಾ, ಪದವಿ ಪಡೆದವರು ಅರ್ಜಿಗಳನ್ನು ಸಲ್ಲಿಸಹುದಾಗಿದೆ. ಎಸ್ಸಿ, ಎಸ್ಟಿ, ವಿಶೇಷ ಚೇತನರಿಗೆ ಯಾವುದೇ ಶುಲ್ಕ ಇರುವುದಿಲ್ಲ. ಉಳಿದವರಿಗೆ 354 ರೂ. ಅರ್ಜಿ ಶುಲ್ಕವಿದೆ. ಕನಿಷ್ಠ 30ರಿಂದ 35 ವರ್ಷದೊಳಗಿನವರು ಅರ್ಜಿ ಸಲ್ಲಿಸಬಹುದಾಗಿದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಅರ್ಜಿ ಸಲ್ಲಿಸೋದು ಹೇಗೆ?
ಮೊದಲಿಗೆ ಅಧಿಕೃತ ವೆಬ್ ಸೈಟ್ pawanhans.co.in ಗೆ ಭೇಟಿ ನೀಡಬೇಕು.
ನಿಮಗೆ ಬೇಕಾದ ಹುದ್ದೆಯ ವಿಭಾಗವನ್ನು ಆಯ್ಕೆ ಮಾಡಬೇಕು.
ಹುದ್ದೆಯ ಅಧಿಸೂಚನೆ ಓದಬೇಕು
ಅರ್ಜಿಯ ಪ್ರಿಂಟೌಟ್ ತೆಗದುಕೊಂಡು ಭರ್ತಿ ಮಾಡಬೇಕು
ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಬೇಕು
ಫ್ಯೂಚರ್ ರೆಫರೆನ್ಸಿಗಾಗಿ ಅರ್ಜಿ ನಮೂನೆಯ ಪ್ರಿಂಟೌಟ್ ತೆಗೆದುಕೊಳ್ಳಬೇಕು
ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸುವುದು ಹೇಗೆ?
ಅಭ್ಯರ್ಥಿಗಳು ಅಧಿಕೃತ ವೆಬ್ ಸೈಟ್ ಗೆ ಹೋಗಿ ಅಧಿಸೂಚನೆ ಓದಬೇಕು. ಅರ್ಜಿಯ ಪ್ರಿಂಟೌಟ್ ತೆಗೆದುಕೊಂಡು, ಅದನ್ನು ಭರ್ತಿ ಮಾಡಿ, ಅಗತ್ಯ ದಾಖಲೆಗಳೊಂದಿಗೆ ಈ ವಿಳಾಸಕ್ಕೆ ಕಳುಹಿಸಬೇಕು. ವಿಳಾಸ: GM (HR&A), Pawan Hans Limited, (A Government of India Enterprise), Northern Region, ROHINI HELIPORT, Sector 36, Rohini, New Delhi- 110085.



















