ಬೆಂಗಳೂರು: ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ಭಾರತೀಯ ಕಾಫಿ ಮಂಡಳಿಯಲ್ಲಿ ಖಾಲಿ ಇರುವ 2 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. 2 ಬರಿಸ್ಟಾ (ವಿವಿಧ ಬಗೆಯ ಕಾಫಿ ತಯಾರಿಸುವವರು) ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ನೇಮಕಾತಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿ ಇಲ್ಲಿದೆ.
ಹುದ್ದೆಗಳ ಕುರಿತು ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ಭಾರತೀಯ ಕಾಫಿ ಮಂಡಳಿ
ಒಟ್ಟು ಹುದ್ದೆಗಳು: 2
ಉದ್ಯೋಗ ಸ್ಥಳ: ಬೆಂಗಳೂರು
ಹುದ್ದೆಗಳ ಹೆಸರು: ಬರಿಸ್ಟಾ
ಸಂದರ್ಶನದ ದಿನಾಂಕ: ಜೂನ್ 30
ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಪಿಯುಸಿ ಮುಗಿಸಿದವರು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವವರಿಗೆ ಗರಿಷ್ಠ 35 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 25 ಸಾವಿರ ರೂಪಾಯಿ ಸಂಬಳ ನೀಡಲಾಗುತ್ತದೆ. ಕಾಫಿ ತಯಾರಿಕೆಯಲ್ಲಿ ಕನಿಷ್ಠ 2 ವರ್ಷಗಳ ಅನುಭವ ಇರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಮೊದಲಿಗೆ coffeeboard.gov.in ವೆಬ್ ಸೈಟ್ ಗೆ ಭೇಟಿ ನೀಡಬೇಕು. ಅಧಿಸೂಚನೆಯನ್ನು ಓದಿಕೊಂಡು ಅಗತ್ಯ ದಾಖಲೆಗಳನ್ನು ರೆಡಿ ಮಾಡಿಟ್ಟುಕೊಳ್ಳಬೇಕು. ಅಗತ್ಯ ದಾಖಲೆಗಳೊಂದಿಗೆ ಈ ಕೆಳಗಿನ ವಿಳಾಸದಲ್ಲಿ ನಡೆಯುವ ಸಂದರ್ಶನದಲ್ಲಿ ಪಾಲ್ಗೊಳ್ಳಬೇಕು ಎಂದು ತಿಳಿಸಲಾಗಿದೆ. ಮೊದಲಿಗೆ 11 ತಿಂಗಳ ಅವಧಿಗೆ ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಇದಾದ ಬಳಿಕ ಕಾರ್ಯಕ್ಷಮತೆ ಆಧಾರದ ಮೇಲೆ ವಿಸ್ತರಣೆ ಮಾಡಲಾಗುತ್ತದೆ.
ಸಂದರ್ಶನ ನಡೆಯುವ ಸ್ಥಳ
1ನೇ ಮಹಡಿ, ಎಐಸಿ-ಸಿಸಿಆರ್ ಐ-ಸಿಇಡಿ, ಕಾಫಿ ಬೋರ್ಡ್, ಮುಖ್ಯ ಕಚೇರಿ, #1, ಡಾ. ಬಿ. ಆರ್. ಅಂಬೇಡ್ಕರ್ ವೀಧಿ, ಬೆಂಗಳೂರು – 560001.



















