ಬೆಂಗಳೂರು: ನೀವು ಕೇಂದ್ರ ಸರ್ಕಾರದ ಸಂಸ್ಥೆಯಲ್ಲಿ ಉದ್ಯೋಗ ಪಡೆಯಬೇಕು ಎಂದು ಬಯಸುತ್ತಿದ್ದೀರಾ? ಹಾಗಾದರೆ, ನಿಮಗೊಂದು ಗುಡ್ ನ್ಯೂಸ್ ಇಲ್ಲಿದೆ. ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ನಲ್ಲಿ (BEL Recruitment 2026) ಖಾಲಿ ಇರುವ 59 ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಪ್ರಾಜೆಕ್ಟ್ ಎಂಜಿನಿಯರ್ ಸೇರಿ ಹಲವು ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ.
ಹುದ್ದೆಗಳ ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (BEL)
ಹುದ್ದೆಗಳು: 59
ಹುದ್ದೆ ಹೆಸರು: ಪ್ರಾಜೆಕ್ಟ್ ಎಂಜಿನಿಯರ್ ಇತ್ಯಾದಿ
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ಜುಲೈ 8
ಉದ್ಯೋಗ ಸ್ಥಳ: ದೇಶಾದ್ಯಂತ
ಅರ್ಜಿ ಸಲ್ಲಿಸಲು ಬಯಸುವವರು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಎಸ್ಸೆಸ್ಸೆಲ್ಸಿ, ಐಟಿಐ, ಡಿಪ್ಲೋಮಾ, ಡಿ.ಎಡ್, ಬಿಎ ಬಿ.ಎಡ್, ಬಿಎಸ್ಸಿ, ಬಿ.ಇ, ಬಿ.ಟೆಕ್, ಎಂ.ಇ, ಎಂ.ಟೆಕ್ ಕೋರ್ಸ್ ಗಳನ್ನು ಮುಗಿಸಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಅಭ್ಯರ್ಥಿಗಳಿಗೆ ಗರಿಷ್ಠ 45 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. ಸಲ್ಲಿಕೆಯಾದ ಅರ್ಜಿಗಳನ್ನು ಮೊದಲು ಪರಿಶೀಲನೆ ಮಾಡಲಾಗುತ್ತದೆ. ಇದಾದ ಬಳಿಕ ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.
ಪ್ರಾಜೆಕ್ಟ್ ಎಂಜಿನಿಯರ್, ಲೆಕ್ಚರರ್, ಟೀಚರ್, ಟೆಕ್ನಿಶಿಯನ್, ಟ್ರೈನಿ ಎಂಜಿನಿಯರ್ ಸೇರಿ ಹಲವು ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಆಯಾ ಹುದ್ದೆಗಳಿಗೆ ಅನುಗುಣವಾಗಿ ಅರ್ಜಿ ಸಲ್ಲಿಸುವ ದಿನಾಂಕಗಳನ್ನು ನಿಗದಿಪಡಿಸಲಾಗಿದೆ. ಜುಲೈ 1ರಿಂದ 8ರವರೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗೆ ಬಿಇಎಲ್ ವೆಬ್ ಸೈಟ್ ಗೆ ಭೇಟಿ ನೀಡಬಹುದಾಗಿದೆ.
ಒಬಿಸಿ ಸಮುದಾಯದವರಿಗೆ 3 ವರ್ಷಗಳ ವಯೋಮಿತಿ ವಿನಾಯಿತಿ ಇದೆ. ಎಸ್ಸಿ, ಎಸ್ಟಿಯವರಿಗೆ 5 ವರ್ಷ ಹಾಗೂ ಪಿಡಬ್ಲ್ಯೂಬಿಡಿ ಅಭ್ಯರ್ಥಿಗಳಿಗೆ 10 ವರ್ಷಗಳ ಸಡಿಲಿಕೆ ಇದೆ. ಅರ್ಹ ಹಾಗೂ ಆಸಕ್ತರು bel-india.in ವೆಬ್ ಸೈಟ್ ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ನೇಮಕಾತಿ ಹೊಂದಿದವರಿಗೆ ಆಯಾ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ 90 ಸಾವಿರ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ.



















