ಬಳ್ಳಾರಿ : ಬಳ್ಳಾರಿಯಲ್ಲಿ ಭ್ರಷ್ಟಾಚಾರ ವಿರುದ್ಧ ಲೋಕಾ ಕಾರ್ಯಾಚರಣೆ ನಡೆದಿದೆ. ಸಿರುಗುಪ್ಪದ ಆರ್‌ಡಿಪಿಆರ್ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ (ಎಇಇ) ತಿಪ್ಪೇಸ್ವಾಮಿ ಅವರ ಮನೆ ಮತ್ತು ಕಚೇರಿಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆ ಈ ಕ್ರಮ ಕೈಗೊಳ್ಳಲಾಗಿದೆ.
ಸಿರುಗುಪ್ಪ ಕಚೇರಿ, ಬಳ್ಳಾರಿ ಹನುಮಾನ್ ನಗರ ನಿವಾಸ ಹಾಗೂ ಕುಡುತಿನಿ ಪಟ್ಟಣದಲ್ಲಿರುವ ಮನೆ ಸೇರಿದಂತೆ ಮೂರು ಸ್ಥಳಗಳಲ್ಲಿ ಏಕಕಾಲಕ್ಕೆ ದಾಳಿ ನಡೆದಿದೆ. ಲೋಕಾಯುಕ್ತ ಎಸ್‌ಪಿ ವಾಸುದೇವ ಅವರ ನೇತೃತ್ವದಲ್ಲಿ ಮೂರು ಪ್ರತ್ಯೇಕ ತಂಡಗಳು ಕಾರ್ಯಾಚರಣೆ ನಡೆಸಿದ್ದು, ದಾಖಲೆಗಳ ಪರಿಶೀಲನೆ ಮುಂದುವರಿದಿದೆ.
ಅಕ್ರಮ ಆಸ್ತಿ ಮತ್ತು ಹಣಕಾಸು ವ್ಯವಹಾರಗಳ ಕುರಿತು ತನಿಖೆ ಗಟ್ಟಿಯಾಗಿದ್ದು, ಅಧಿಕಾರಿಗಳು ಹೆಚ್ಚಿನ ಮಾಹಿತಿಯನ್ನು ಸಂಗ್ರಹಿಸುತ್ತಿದ್ದಾರೆ ಎಂದು ತಿಳಿದುಬಂದಿದೆ.
ಇದನ್ನೂ ಓದಿ : ಕೈಕೊಟ್ಟ ಮುಂಗಾರು ಮಳೆ | ಮೊಳಕೆಯ ಹಂತದಲ್ಲಿಯೇ ಸಾಯುತ್ತಿರೋ ಬೆಳೆ


















