ಬೆಂಗಳೂರು: ನೀವೇನಾದರೂ ಪದವಿ ಹಾಗೂ ಸ್ನಾತಕೋತ್ತರ ಪದವಿ ಮುಗಿಸಿ ಉದ್ಯೋಗಕ್ಕಾಗಿ ಹುಡುಕಾಟ ನಡೆಸುತ್ತಿದ್ದೀರಾ? ಅದರಲ್ಲೂ, ಹಾವೇರಿ ಜಿಲ್ಲೆಯವರಾಗಿದ್ದು, ನಿಮ್ಮ ಜಿಲ್ಲೆಯಲ್ಲಿಯೇ ಉದ್ಯೋಗ ಪಡೆಯಬೇಕು ಎಂದು ಬಯಸುತ್ತಿದ್ದೀರಾ? ಹಾಗಾದರೆ, ನಿಮಗೊಂದು ಸುವರ್ಣಾವಕಾಶ ಲಭಿಸಿದೆ. ಹಾವೇರಿಯಲ್ಲಿರುವ ಕೃಷಿ ಇಲಾಖೆಯಲ್ಲಿ (Agriculture Department Haveri Recruitment 2026) ಖಾಲಿ ಇರುವ 7 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಅರ್ಹ ಹಾಗೂ ಆಸಕ್ತಿ ಹೊಂದಿರುವವರು ಆಫ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಹುದ್ದೆಗಳ ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ಕೃಷಿ ಇಲಾಖೆ, ಹಾವೇರಿ
ಹುದ್ದೆ ಹೆಸರು: ತಾಲೂಕು ಟೆಕ್ನಿಕಲ್ ಮ್ಯಾನೇಜರ್ ಇತ್ಯಾದಿ
ಒಟ್ಟು ಹುದ್ದೆಗಳು: 7
ಅರ್ಜಿ ಸಲ್ಲಿಕೆ ವಿಧಾನ: ಆಫ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಜೂನ್ 25
1 ತಾಲೂಕು ಟೆಕ್ನಿಕಲ್ ಮ್ಯಾನೇಜರ್ ಹಾಗೂ 6 ಅಸಿಸ್ಟಂಟ್ ಟೆಕ್ನಿಕಲ್ ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಪದವಿ ಹಾಗೂ ಸ್ನಾತಕೋತ್ತರ ಪದವಿ ಮುಗಿಸಿದವರು ಅರ್ಜಿಗಳನ್ನು ಸಲ್ಲಿಸಲು ಅರ್ಹರಾಗಿದ್ದಾರೆ. ಅರ್ಜಿ ಸಲ್ಲಿಸುವವರಿಗೆ ಗರಿಷ್ಠ 45 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
ಅರ್ಜಿಗಳನ್ನು ಸಲ್ಲಿಸುವವರಿಗೆ ಯಾವುದೇ ಶುಲ್ಕವನ್ನು ನಿಗದಿಪಡಿಸಿಲ್ಲ. ಸಲ್ಲಿಕೆಯಾದ ಅರ್ಜಿಗಳನ್ನು ಮೊದಲು ಪರಿಶೀಲನೆ ಮಾಡಲಾಗುತ್ತದೆ. ಇದಾದ ಬಳಿಕ ಸಂದರ್ಶನಕ್ಕೆ ಆಹ್ವಾನಿಸಿ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸಲು ಬಯಸುವವರು ಮೊದಲಿಗೆ haveri.nic.in ಗೆ ಭೇಟಿ ನೀಡಬೇಕು. ಅರ್ಜಿ ನಮೂನೆಯ ಪ್ರಿಂಟೌಟ್ ತೆಗೆದುಕೊಂಡು ಭರ್ತಿ ಮಾಡಬೇಕು. ಭರ್ತಿ ಮಾಡಿದ ಅರ್ಜಿಯನ್ನು ಈ ಕೆಳಗಿನ ವಿಳಾಸಕ್ಕೆ ಕಳುಹಿಸಬೇಕು.
ಅರ್ಜಿ ಸಲ್ಲಿಸಬೇಕಾದ ವಿಳಾಸ
Agriculture Department, Joint Director of Agriculture Office, District Administration Building, Devagiri – 581110



















