ಬೆಂಗಳೂರು : ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ನ್ಯಾಷನಲ್ ಥರ್ಮಲ್ ಪವರ್ ಕಾರ್ಪೊರೇಷನ್ ಲಿಮಿಟೆಡ್ ನಲ್ಲಿ ಖಾಲಿ ಇರುವ (NTPC Recruitment 2026) 40 ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಇದು ಕೇಂದ್ರ ಸರ್ಕಾರಿ ಸಂಸ್ಥೆಯಲ್ಲಿ ಉದ್ಯೋಗ ಹಿಡಿಯಬೇಕು ಎಂದು ಬಯಸುವವರಿಗೆ ಒಳ್ಳೆಯ ಅವಕಾಶವಾಗಿದೆ. ಅಸಿಸ್ಟಂಟ್ ಕೆಮಿಸ್ಟ್ ಟ್ರೈನಿ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಅವಕಾಶವಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ನ್ಯಾಷನಲ್ ಥರ್ಮಲ್ ಪವರ್ ಕಾರ್ಪೊರೇಷನ್ ಲಿಮಿಟೆಡ್ (NTPC)
ಹುದ್ದೆಗಳ ಹೆಸರು: ಅಸಿಸ್ಟಂಟ್ ಕೆಮಿಸ್ಟ್ ಟ್ರೈನಿ
ಒಟ್ಟು ಹುದ್ದೆಗಳು: 40
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಜುಲೈ 10
ದೇಶದ ವಿವಿಧೆಡೆ ಇರುವ NTPC ಘಟಕಗಳಲ್ಲಿ ಕೆಲಸ ಮಾಡಲು ಇಚ್ಛಿಸುವವರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಿಂದ ಎಂಎಸ್ಸಿ ಕೋರ್ಸ್ ಮುಗಿಸಿದವರು ಅರ್ಜಿ ಸಲ್ಲಿಸಬಹುದಾಗಿದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 30 ಸಾವಿರ ರೂಪಾಯಿಯಿಂದ 1.20 ಲಕ್ಷ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ. ಅರ್ಜಿ ಸಲ್ಲಿಸುವವರಿಗೆ ಗರಿಷ್ಠ 27 ವರ್ಷಗಳ ವಯೋಮಿತಿ ನಿಗದಿಪಡಿಸಲಾಗಿದೆ.
ಜನರಲ್ ಹಾಗೂ ಒಬಿಸಿಯವರಿಗೆ 500 ರೂಪಾಯಿ ಅರ್ಜಿ ಶುಲ್ಕವಿದೆ. ಉಳಿದವರಿಗೆ ಯಾವುದೇ ಶುಲ್ಕ ಇರುವುದಿಲ್ಲ. ಗರಿಷ್ಠ 27 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ವಿಶೇಷ ಚೇತನರಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆ ಇದೆ. ಎಸ್ಸಿ, ಎಸ್ಟಿಯವರಿಗೆ 5 ವರ್ಷ ಮತ್ತು ಜನರಲ್ ಹಾಗೂ ಒಬಿಸಿಯವರಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆ ಇದೆ. ಆನ್ ಲೈನ್ ಟೆಸ್ಟ್, ದಾಖಲೆ ಪರಿಶೀಲನೆ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.
ಅರ್ಜಿ ಸಲ್ಲಿಸೋದು ಹೇಗೆ?
ಮೊದಲಿಗೆ ಅಧಿಕೃತ ವೆಬ್ ಸೈಟ್ ntpc.co.in ಗೆ ಭೇಟಿ ನೀಡಿ
ನಿಮಗೆ ಬೇಕಾದ ಹುದ್ದೆಗಳ ಅಧಿಸೂಚನೆ ಓದಿ
ಆನ್ ಲೈನ್ ಮೂಲಕ ಅರ್ಜಿಯನ್ನು ಭರ್ತಿ ಮಾಡಿ
ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಿ
ಫ್ಯೂಚರ್ ರೆಫರೆನ್ಸಿಗಾಗಿ ಅರ್ಜಿ ನಮೂನೆಯ ಪ್ರಿಂಟೌಟ್ ತೆಗೆದಿಟ್ಟುಕೊಳ್ಳಬೇಕು



















