ಬೆಂಗಳೂರು : ಕೇಂದ್ರ ಸರ್ಕಾರಿ ಸ್ವಾಮ್ಯದ, ಮೈಸೂರಿನಲ್ಲಿಯೇ ಕೇಂದ್ರ ಕಚೇರಿ ಹೊಂದಿರುವ ಸೆಂಟ್ರಲ್ ಫುಡ್ ಟೆಕ್ನಾಲಜಿಕಲ್ ರಿಸರ್ಚ್ ಇನ್ ಸ್ಟಿಟ್ಯೂಟ್ (CFTRI Recruitment 2026) ಸಂಸ್ಥೆಯಲ್ಲಿ ಖಾಲಿ ಒಂದು ಹುದ್ದೆಯ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಒಂದು ಪ್ರಾಜೆಕ್ಟ್ ಅಸಿಸ್ಟಂಟ್ ಹುದ್ದೆಯನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಮೈಸೂರಿನಲ್ಲಿಯೇ ಉದ್ಯೋಗ ಹುಡುಕುತ್ತಿರುವವರಿಗೆ ಇದು ಗುಡ್ ನ್ಯೂಸ್ ಆಗಿದೆ. ನೇಮಕಾತಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿ ಇಲ್ಲಿದೆ.
ನೇಮಕಾತಿ ಸಂಸ್ಥೆ: ಸೆಂಟ್ರಲ್ ಫುಡ್ ಟೆಕ್ನಾಲಜಿಕಲ್ ರಿಸರ್ಚ್ ಇನ್ ಸ್ಟಿಟ್ಯೂಟ್ (CFTRI)
ಒಟ್ಟು ಹುದ್ದೆಗಳು: 01
ಉದ್ಯೋಗ ಸ್ಥಳ: ಮೈಸೂರು, ಕರ್ನಾಟಕ
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಜುಲೈ 5
ಅರ್ಜಿ ಸಲ್ಲಿಸಲು ಬಯಸುವವರು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಿಂದ ಪದವಿ ಮುಗಿಸಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 27 ಸಾವಿರ ರೂ. ಸಂಬಳ ನೀಡಲಾಗುತ್ತದೆ. ಅರ್ಜಿ ಸಲ್ಲಿಸುವವರಿಗೆ ಗರಿಷ್ಠ 35 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. ಅರ್ಜಿ ಸಲ್ಲಿಸಲು ಯಾವುದೇ ಶುಲ್ಕ ಇರುವುದಿಲ್ಲ. ಸಲ್ಲಿಕೆಯಾದ ಅರ್ಜಿಗಳನ್ನು ಪರಿಶೀಲನೆ ನಡೆಸಿ, ಮೆರಿಟ್ ಲಿಸ್ಟ್ ಬಿಡುಗಡೆ ಮಾಡಲಾಗುತ್ತದೆ. ಇದಾದ ಬಳಿಕ ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಆಹ್ವಾನಿಸಿ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ?
ಮೊದಲಿಗೆ ಅಧಿಕೃತ ವೆಬ್ ಸೈಟ್ ಆಗಿರುವ cftri.res.in ಗೆ ಭೇಟಿ ನೀಡಬೇಕು
ನಿಮಗೆ ಬೇಕಾದ ಹುದ್ದೆಗಳ ಅಧಿಸೂಚನೆಯನ್ನು ಓದಿ ಅರ್ಹತೆ ಪರಿಶೀಲಿಸಬೇಕು
ಆನ್ ಲೈನ್ ಅರ್ಜಿ ನಮೂನೆಯ ಲಿಂಕ್ ತೆರೆದು, ಭರ್ತಿ ಮಾಡಬೇಕು
ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಬೇಕು
ಫ್ಯೂಚರ್ ರೆಫರೆನ್ಸಿಗಾಗಿ ಅರ್ಜಿ ನಮೂನೆಯ ಪ್ರಿಂಟೌಟ್ ತೆಗೆದಿಟ್ಟುಕೊಳ್ಳಬೇಕು
ಇದನ್ನೂ ಓದಿ : ಇಂದು ರಾತ್ರಿಯಿಂದಲೇ 3 ದಿನ EPFO ವೆಬ್‌ಸೈಟ್ ಬಂದ್ : ಯಾವ ಸೇವೆ ಲಭ್ಯವಿಲ್ಲ? ಇಲ್ಲಿದೆ ಡಿಟೇಲ್ಸ್



















