ಬೆಂಗಳೂರು : ನೀವು ಬೆಳಗಾವಿ ಜಿಲ್ಲೆಯವರಾ? ನಿಮ್ಮ ಜಿಲ್ಲೆಯಲ್ಲಿಯೇ ಉದ್ಯೋಗ ಪಡೆಯಬೇಕು ಎಂದು ಪ್ರಯತ್ನಿಸುತ್ತಿದ್ದೀರಾ? ಹಾಗಾದರೆ, ನಿಮಗೊಂದು ಗುಡ್ ನ್ಯೂಸ್ ಇದೆ. ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ HLL ಲೈಫ್ ಕೇರ್ ಲಿಮಿಟೆಡ್ ಸಂಸ್ಥೆಯಲ್ಲಿ (HLL Lifecare Recruitment 2026) ಖಾಲಿ ಇರುವ 1 ಹುದ್ದೆಯ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. 1 ಸೆಕ್ಯುರಿಟಿ ಇನ್ಸ್ ಪೆಕ್ಟರ್ ಹುದ್ದೆಯನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಹುದ್ದೆಗಳ ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: HLL Lifecare ಲಿಮಿಟೆಡ್
ಒಟ್ಟು ಹುದ್ದೆಗಳು: 1
ಅರ್ಜಿ ಸಲ್ಲಿಕೆ ಮಾದರಿ: ಆನ್ ಲೈನ್
ಉದ್ಯೋಗ ಸ್ಥಳ: ಬೆಳಗಾವಿ
ಹುದ್ದೆಗಳ ಹೆಸರು: ಸೆಕ್ಯುರಿಟಿ ಇನ್ಸ್ ಪೆಕ್ಟರ್
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಜುಲೈ 8
ಬೆಳಗಾವಿಯಲ್ಲಿ ಕೆಲಸ ಮಾಡಲು ಇಚ್ಛಿಸುವವರಿಗೆ ಇದು ಒಳ್ಳೆಯ ಅವಕಾಶವಾಗಿದೆ. ಸಲ್ಲಿಕೆಯಾದ ಅರ್ಜಿಗಳನ್ನು ಮೊದಲು ಪರಿಶೀಲನೆ ಮಾಡಲಾಗುತ್ತದೆ. ಇದಾದ ಬಳಿಕ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಸಂಸ್ಥೆಯ ಮಾನದಂಡಗಳ ಆಧಾರದ ಮೇಲೆ ವಿದ್ಯಾರ್ಹತೆ ಹಾಗೂ ಮಾಸಿಕ ಸಂಬಳವನ್ನು ನಿಗದಿಪಡಿಸಲಾಗಿದೆ.
ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಮೊದಲಿಗೆ https://www.lifecarehll.com/careers ವೆಬ್ ಸೈಟ್ ಗೆ ಭೇಟಿ ನೀಡಬೇಕು. ಅಧಿಸೂಚನೆಯನ್ನು ಓದಿಕೊಂಡು ಅಗತ್ಯ ದಾಖಲೆಗಳನ್ನು ರೆಡಿ ಮಾಡಿಟ್ಟುಕೊಳ್ಳಬೇಕು. ಅರ್ಜಿ ನಮೂನೆಯನ್ನು ಭರ್ತಿ ಮಾಡಿ, ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಬೇಕು. ಫ್ಯೂಚರ್ ರೆಫರೆನ್ಸಿಗಾಗಿ ಅರ್ಜಿ ನಮೂನೆಯ ಪ್ರಿಂಟೌಟ್ ತೆಗೆದುಕೊಂಡಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಇದನ್ನೂ ಓದಿ : ಡೆನ್ಮಾರ್ಕ್‌ನಲ್ಲಿ ಆಜಾನ್ ನಿಷೇಧಕ್ಕೆ ಮತ್ತೆ ಸಿದ್ಧತೆ : ‘ಪಾಕ್ ಉಪನಗರದಂತೆ ಬದಲಾಗಲು ಬಿಡುವುದಿಲ್ಲ’ ಎಂದ ಸಚಿವ!



















