ಬೆಂಗಳೂರು : ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ದಿ ನ್ಯೂ ಇಂಡಿಯಾ ಅಶ್ಯೂರೆನ್ಸ್ ಕಂಪನಿ ಲಿಮಿಟೆಡ್ (NIACL Apprentice Recruitment 2026) ಸಂಸ್ಥೆಯಲ್ಲಿ ಖಾಲಿ ಇರುವ 550 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. 550 ಗ್ರಾಜ್ಯುಯೇಟ್ ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಇದರೊಂದಿಗೆ ಫ್ರೆಶರ್ ಗಳು ಕೇಂದ್ರ ಸರ್ಕಾರದ ಸಂಸ್ಥೆಯಲ್ಲಿ ವೃತ್ತಿ ತರಬೇತಿ ಪಡೆಯಲು ಒಳ್ಳೆಯ ಅವಕಾಶ ಸಿಕ್ಕಂತಾಗಿದೆ.
ಹುದ್ದೆಗಳ ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ದಿ ನ್ಯೂ ಇಂಡಿಯಾ ಅಶ್ಯೂರೆನ್ಸ್ ಕಂಪನಿ ಲಿಮಿಟೆಡ್
ಒಟ್ಟು ಹುದ್ದೆಗಳು: 550
ಹುದ್ದೆಗಳ ಹೆಸರು: ಅಪ್ರೆಂಟಿಸ್
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ಜುಲೈ 6
ಅರ್ಜಿ ಸಲ್ಲಿಸಲು ಬಯಸುವವರು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಪದವಿ ಪಡೆದಿರಬೇಕು. ಅಭ್ಯರ್ಥಿಗಳು 2022ರಿಂದ 2026ರ ಅವಧಿಯಲ್ಲಿ ಪದವಿ ಪಡೆದಿರಬೇಕು. ಅರ್ಜಿ ಸಲ್ಲಿಸುವವರಿಗೆ ಕನಿಷ್ಠ 21ರಿಂದ 30 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 12,300 ರೂಪಾಯಿ ಸ್ಟೈಪೆಂಡ್ ನೀಡಲಾಗುತ್ತದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಒಂದು ವರ್ಷದ ಅವಧಿಗೆ ಅಭ್ಯರ್ಥಿಗಳಿಗೆ ತರಬೇತಿ ನೀಡಲಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ?
ಮೊದಲಿಗೆ www.newindia.co.in ವೆಬ್ ಸೈಟ್ ಗೆ ಭೇಟಿ ನೀಡಬೇಕು
ಅಪ್ರೆಂಟಿಸ್ ಹುದ್ದೆಗಳಿಗೆ ಸಂಬಂಧಿಸಿದ ಅಧಿಸೂಚನೆ ಓದಿಕೊಳ್ಳ ಬೇಕು
ಆನ್ ಲೈನ್ ಮೂಲಕವೇ ಅರ್ಜಿಯನ್ನು ಭರ್ತಿ ಮಾಡಬೇಕು
ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಬೇಕು
ಫ್ಯೂಚರ್ ರೆಫರೆನ್ಸಿಗಾಗಿ ಅರ್ಜಿ ನಮೂನೆಯ ಪ್ರಿಂಟೌಟ್ ತೆಗೆದುಕೊಂಡಿರಬೇಕು
ಇದನ್ನೂ ಓದಿ : HLL Lifecare ಸಂಸ್ಥೆಯಲ್ಲಿ ನೇಮಕಾತಿ : ಬೆಳಗಾವಿ ಜಿಲ್ಲೆಯವರಿಗಿದು ಗುಡ್ ನ್ಯೂಸ್



















