ಬೆಂಗಳೂರು : ನೀವು ಬೆಂಗಳೂರಿನಲ್ಲೇ ಒಳ್ಳೆಯ ಉದ್ಯೋಗ ಪಡೆಯಲು ಬಯಸುತ್ತಿದ್ದೀರಾ? ಹಾಗಾದರೆ, ನಿಮಗೊಂದು ಗುಡ್ ನ್ಯೂಸ್ ಇದೆ. ರೈಲು ಮೂಲಸೌಲಭ್ಯ ಅಭಿವೃದ್ಧಿ ಕಂಪನಿ (ಕರ್ನಾಟಕ) ನಿಯಮಿತ ಸಂಸ್ಥೆಯಲ್ಲಿ (K-RIDE Recruitment 2026) ಖಾಲಿ ಇರುವ ಒಂದು ಹುದ್ದೆಯ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಚೀಫ್ ಸೇಫ್ಟಿ ಆಫೀಸರ್ ಹುದ್ದೆಯನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ.
ಹುದ್ದೆಗಳ ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ರೈಲು ಮೂಲಸೌಲಭ್ಯ ಅಭಿವೃದ್ಧಿ ಕಂಪನಿ (ಕರ್ನಾಟಕ) ನಿಯಮಿತ (K-RIDE)
ಹುದ್ದೆಗಳ ಹೆಸರು: ಚೀಫ್ ಸೇಫ್ಟಿ ಆಫೀಸರ್
ಹುದ್ದೆಗಳ ಸಂಖ್ಯೆ: 01
ಉದ್ಯೋಗ ಸ್ಥಳ: ಬೆಂಗಳೂರು
ಅರ್ಜಿ ಸಲ್ಲಿಸುವ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಜುಲೈ 9
ಅರ್ಜಿ ಸಲ್ಲಿಸಲು ಬಯಸುವವರು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಬಿ.ಇ ಅಥವಾ ಬಿ.ಟೆಕ್ ಕೋರ್ಸ್ ಮುಗಿಸಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಅರ್ಜಿ ಸಲ್ಲಿಸುವವರಿಗೆ ಗರಿಷ್ಠ 57 ವರ್ಷಗಳ ವಯೋಮಿತಿ ಇದೆ. ಅರ್ಜಿ ಸಲ್ಲಿಸಲು ಯಾವುದೇ ಶುಲ್ಕ ಇರುವುದಿಲ್ಲ. ನೇಮಕಾತಿ ಹೊಂದಿದವರಿಗೆ ಮಾಸಿಕ 2.61 ಲಕ್ಷ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ.
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮೊದಲಿಗೆ kride.in ವೆಬ್ ಸೈಟ್ ಗೆ ಭೇಟಿ ನೀಡಬೇಕು. ಅಧಿಸೂಚನೆಯನ್ನು ಗಮನವಿಟ್ಟು ಓದಿಕೊಂಡು ದಾಖಲೆಗಳನ್ನು ಸಿದ್ಧಪಡಿಸಿಕೊಳ್ಳಬೇಕು. ಆನ್ ಲೈನ್ ಮೂಲಕವೇ ಅರ್ಜಿ ಭರ್ತಿ ಮಾಡಿ, ಅಗತ್ಯ ದಾಖಲೆಗಳೊಂದಿಗೆ ಅಪ್ ಲೋಡ್ ಮಾಡಬೇಕು. ಅಭ್ಯರ್ಥಿಗಳನ್ನು ದಾಖಲೆ ಪರಿಶೀಲನೆ ಹಾಗೂ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಇದನ್ನೂ ಓದಿ : ಪ್ರತಿಯೊಬ್ಬರೂ ಐಟಿ ರಿಟರ್ನ್ಸ್ ಸಲ್ಲಿಸಬೇಕಿಲ್ಲ : ಯಾರಿಗೆಲ್ಲ ವಿನಾಯಿತಿ ಇದೆ? ಇಲ್ಲಿದೆ ಮಾಹಿತಿ



















