ಉಡುಪಿ : ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ, ಕರ್ನಾಟಕದ ಉಡುಪಿಯಲ್ಲಿರುವ ಉಡುಪಿ ಕೊಚ್ಚಿನ್ ಶಿಪ್ ಯಾರ್ಡ್ ಲಿಮಿಟೆಡ್ ನಲ್ಲಿ (UCSL Recruitment 2026) ಖಾಲಿ ಇರುವ 4 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಅಸಿಸ್ಟಂಟ್ ಜನರಲ್ ಮ್ಯಾನೇಜರ್ ಸೇರಿ ಹಲವು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅರ್ಹ ಹಾಗೂ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ನೇಮಕಾತಿ ಸಂಸ್ಥೆ : ಉಡುಪಿ ಕೊಚ್ಚಿನ್ ಶಿಪ್ ಯಾರ್ಡ್
ಹುದ್ದೆಗಳ ಹೆಸರು : ಅಸಿಸ್ಟಂಟ್ ಜನರಲ್ ಮ್ಯಾನೇಜರ್ ಇತ್ಯಾದಿ
ಒಟ್ಟು ಹುದ್ದೆಗಳು : 4
ಉದ್ಯೋಗ ಸ್ಥಳ : ಉಡುಪಿ
ಅರ್ಜಿ ಸಲ್ಲಿಸಲು ಕೊನೆಯ ದಿನ : ಜುಲೈ 16
2 ಅಸಿಸ್ಟಂಟ್ ಜನರಲ್ ಮ್ಯಾನೇಜರ್, 1 ಮ್ಯಾನೇಜರ್ ಹಾಗೂ 1 ಡೆಪ್ಯೂಟಿ ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಮೆಕ್ಯಾನಿಕಲ್, ಎಲೆಕ್ಟ್ರಾನಿಕ್ಸ್, ಸಿವಿಲ್ ಎಂಜಿನಿಯರಿಂಗ್ ನಲ್ಲಿ ಬಿ.ಇ, ಬಿ.ಟೆಕ್ ಮುಗಿಸಿರಬೇಕು. ನೇಮಕಾತಿ ಹೊಂದಿದವರಿಗೆ ಮಾಸಿಕ 1.59 ಲಕ್ಷ ರೂಪಾಯಿವರೆಗೆ ವೇತನ ನೀಡಲಾಗುತ್ತದೆ.
ಅರ್ಜಿ ಸಲ್ಲಿಸುವವರಿಗೆ ಗರಿಷ್ಠ 50 ವರ್ಷಗಳ ವಯೋಮಿತಿ ನಿಗಿದಿಪಡಿಸಲಾಗಿದೆ. ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆ ಇದೆ. ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ. ಉಳಿದವರಿಗೆ 1 ಸಾವಿರ ರೂಪಾಯಿ ಅರ್ಜಿ ಶುಲ್ಕವಿದೆ. ಅರ್ಜಿ ಸಲ್ಲಿಸಲು ಬಯಸುವವರು ಮೊದಲಿಗೆ udupicsl.com ವೆಬ್ ಸೈಟ್ ಗೆ ಭೇಟಿ ನೀಡಬೇಕು. ನಿಮಗೆ ಬೇಕಾದ ಹುದ್ದೆಯ ಅಧಿಸೂಚನೆ ಓದಿಕೊಳ್ಳಬೇಕು. ಇದಾದ ಬಳಿಕ ಯಾವುದೇ ತಪ್ಪುಗಳಿಲ್ಲದೆ ಅರ್ಜಿ ನಮೂನೆಯನ್ನು ಭರ್ತಿ ಮಾಡಬೇಕು. ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಬೇಕು.
ಇದನ್ನೂ ಓದಿ : ಹೈಟೆಕ್ ಇ-ಖಾತಾ ದಂಧೆ ಬಯಲು ; ಕೆಂಗೇರಿ ಉಪ ವಿಭಾಗದ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ N.R ರಮೇಶ್ ಆಗ್ರಹ!


















