ಬೆಂಗಳೂರು : ಕಾಂಗ್ರೆಸ್ ಶಾಸಕರ ಕ್ಷೇತ್ರಗಳಿಗೆ ಮಾತ್ರ ಹೆಚ್ಚಿನ ಅನುದಾನ ಬಿಡುಗಡೆ ಮಾಡಲಾಗುತ್ತಿದೆ ಎಂದು ಆರೋಪಿಸಿರುವ ವಿಪಕ್ಷ ನಾಯಕ ಆರ್. ಅಶೋಕ್, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಆರ್. ಅಶೋಕ್, ವಿಪಕ್ಷ ಶಾಸಕರ ಕ್ಷೇತ್ರಗಳ ಜನರಿಗೆ ಅನ್ಯಾಯವಾಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
“ಸರ್ಕಾರ ತೆರಿಗೆದಾರರ ಹಣವನ್ನು ಪಕ್ಷದ ಆಧಾರದ ಮೇಲೆ ಹಂಚಿಕೆ ಮಾಡಬಾರದು. ಇದು ಕಾಂಗ್ರೆಸ್ ಪಕ್ಷದ ಹಣವಲ್ಲ, ಜನರು ಕಟ್ಟಿದ ತೆರಿಗೆ ಹಣ. ಅಭಿವೃದ್ಧಿಯಲ್ಲಿ ಯಾವುದೇ ತಾರತಮ್ಯ ಇರಬಾರದು” ಎಂದು ಹೇಳಿದ್ದಾರೆ.
ಬೆಂಗಳೂರು ಅಭಿವೃದ್ಧಿಯಲ್ಲೂ ತಾರತಮ್ಯ ಮಾಡಲಾಗುತ್ತಿದೆ ಎಂದು ಆರೋಪಿಸಿದ ಅವರು, ನಗರದಲ್ಲಿ ಗುಂಡಿಗಳ ಸಮಸ್ಯೆ, ಮಳೆ ಬಂದಾಗ ಉಂಟಾಗುವ ಪ್ರವಾಹ, ಹೆಚ್ಚುತ್ತಿರುವ ಟ್ರಾಫಿಕ್ ಸಮಸ್ಯೆಗಳ ಕಡೆ ಸರ್ಕಾರ ಗಮನ ಹರಿಸುತ್ತಿಲ್ಲ ಎಂದು ಟೀಕಿಸಿದ್ದಾರೆ.
“ಮುಖ್ಯಮಂತ್ರಿ ಎಲ್ಲರಿಗೂ ಇರಬೇಕೇ ಹೊರತು ಕಾಂಗ್ರೆಸ್ ಪಕ್ಷಕ್ಕೆ ಮಾತ್ರ ಅಲ್ಲ. ಬೆಂಗಳೂರಿಗೆ ಬೇಕಿರುವುದು ಸಮಾನ ಅಭಿವೃದ್ಧಿಯೇ ಹೊರತು ತಾರತಮ್ಯವಲ್ಲ” ಎಂದು ಆರ್. ಅಶೋಕ್ ತಮ್ಮ ಎಕ್ಸ್ ಪೋಸ್ಟ್‌ನಲ್ಲಿ ಕಿಡಿಕಾರಿದ್ದಾರೆ.
ಇದನ್ನೂ ಓದಿ : ಹೈಟೆಕ್ ಇ-ಖಾತಾ ದಂಧೆ ಬಯಲು ; ಕೆಂಗೇರಿ ಉಪ ವಿಭಾಗದ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ N.R ರಮೇಶ್ ಆಗ್ರಹ!



















