ಉಡುಪಿ : ಜಿಲ್ಲೆಯ ಕಾರ್ಕಳ ನಗರದ ಹೃದಯಭಾಗದಲ್ಲಿರುವ ಬಸ್ ನಿಲ್ದಾಣದ ಮುಂಭಾಗದ ರಸ್ತೆಯಲ್ಲಿ ಉಂಟಾಗಿದ್ದ ದೊಡ್ಡ ಗುಂಡಿಯೊಳಗೆ ಸಾರ್ವಜನಿಕರು ಬಾಳೆ ಗಿಡ ನೆಡುವ ಮೂಲಕ ವಿಶಿಷ್ಟ ರೀತಿಯಲ್ಲಿ ಅಸಮಾಧಾನ ವ್ಯಕ್ತಪಡಿಸಿದ ಘಟನೆ ನೆಡೆದಿದೆ.
ಕೆಲ ತಿಂಗಳ ಹಿಂದೆ ಪೈಪ್‌ಲೈನ್ ದುರಸ್ತಿ ಕಾಮಗಾರಿಯ ನಂತರ ಕಾರ್ಕಳ ಪುರಸಭೆ ಕೈಗೊಂಡಿದ್ದ ಡಾಂಬರು ತೇಪೆ ಕಾಮಗಾರಿ, ಮೇ ತಿಂಗಳಲ್ಲಿ ಸುರಿದ ಮಳೆಯಿಂದ ಹಾನಿಗೊಳಗಾಗಿ, ದೊಡ್ಡ ಹೊಂಡ ನಿರ್ಮಾಣವಾಗಿತ್ತು.

ಇದರಿಂದ ವಾಹನ ಸಂಚಾರಕ್ಕೆ ತೀವ್ರ ತೊಂದರೆ ಉಂಟಾಗಿದ್ದರೂ, ಸಮೀಪದಲ್ಲೇ ಪುರಸಭೆ ಕಚೇರಿ ಇದ್ದರೂ ಅಧಿಕಾರಿಗಳು ಸಮಸ್ಯೆಗೆ ತಕ್ಷಣ ಸ್ಪಂದಿಸಿರಲಿಲ್ಲ ಎಂಬ ಆರೋಪ ವ್ಯಕ್ತವಾಗಿತ್ತು.
ಈ ಹಿನ್ನೆಲೆ ಅಕ್ರೋಶಗೊಂಡ ಸ್ಥಳೀಯರು ರಸ್ತೆ ಗುಂಡಿಯಲ್ಲಿ ಮೂರು ಬಾಳೆಗಿಡಗಳನ್ನು ನೆಟ್ಟು ವಿಭಿನ್ನ ರೀತಿಯಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಘಟನೆಯ ಮಾಹಿತಿ ದೊರಕುತ್ತಿದ್ದಂತೆಯೇ ಪುರಸಭೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ತುರ್ತು ಕ್ರಮ ಕೈಗೊಂಡು ಹೊಂಡವನ್ನು ಕಾಂಕ್ರೀಟ್ ಮೂಲಕ ಮುಚ್ಚಿ ಕಾಮಗಾರಿ ಪೂರ್ಣಗೊಳಿಸಿದ್ದಾರೆ.
ಇದನ್ನೂ ಓದಿ : ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!



















