ಬೆಂಗಳೂರು : ಕೇಂದ್ರ ಸರ್ಕಾರದ ಹುದ್ದೆ ಹುಡುತ್ತಿರುವವರಿಗೆ, ಅದರಲ್ಲೂ ಬೆಂಗಳೂರಿನಲ್ಲಿಯೇ ವೃತ್ತಿಜೀವನ ಆರಂಭಿಸಬೇಕು ಎನ್ನುವವರಿಗೆ ಗುಡ್ ನ್ಯೂಸ್ ಸಿಕ್ಕಿದೆ. ಕೇಂದ್ರ ಸರ್ಕಾರಿ ಸ್ವಾಮ್ಯದ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ಸಂಸ್ಥೆಯಲ್ಲಿ (HAL India Recruitment 2026) ಖಾಲಿ ಇರುವ 2 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಎರಡು ರೇಡಿಯೋಗ್ರಾಫರ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅಭ್ಯರ್ಥಿಗಳಿಗೆ ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್
ಹುದ್ದೆ ಹೆಸರು: ರೇಡಿಯೋಗ್ರಾಫರ್
ಒಟ್ಟು ಹುದ್ದೆ: 02
ಉದ್ಯೋಗ ಸ್ಥಳ: ಬೆಂಗಳೂರು
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಜುಲೈ 13
ಅರ್ಜಿ ಸಲ್ಲಿಕೆ ವಿಧಾನ: ಆಫ್ ಲೈನ್
ರೇಡಿಯೋಗ್ರಾಫರ್ ಅಥವಾ ಎಕ್ಸ್-ರೇ ಟೆಕ್ನಿಶಿಯನ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಎಸ್ಸೆಸ್ಸೆಲ್ಸಿ, ಪಿಯುಸಿ, ಡಿಪ್ಲೋಮಾ ಹಾಗೂ ಡಿಗ್ರಿ ಕೋರ್ಸ್ ಗಳನ್ನು ಮುಗಿಸಿದವರು ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ. ಅರ್ಜಿ ಸಲ್ಲಿಸುವವರಿಗೆ ಗರಿಷ್ಠ 40 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವಿರುವುದಿಲ್ಲ. ಸಲ್ಲಿಕೆಯಾದ ಅರ್ಜಿಗಳನ್ನು ಮೊದಲು ಪರಿಶೀಲನೆ ಮಾಡಲಾಗುತ್ತದೆ. ಇದಾದ ಬಳಿಕ ಸಂದರ್ಶನಕ್ಕೆ ಆಹ್ವಾನಿಸಿ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ hal-india.co.in ವೆಬ್ ಸೈಟ್ ಗೆ ಭೇಟಿ ನೀಡಬಹುದಾಗಿದೆ.
ಅರ್ಜಿ ಸಲ್ಲಿಸಬೇಕಾದ ವಿಳಾಸ
The Dy. General Manager(HR), Industrial Health Center, Hindustan Aeronautics Limited, Suranjandas Road, (Near Old Airport), Bangalore-560017
ಇದನ್ನೂ ಓದಿ : 2028ರ ಲಾಸ್ ಏಂಜಲೀಸ್ ಒಲಿಂಪಿಕ್ಸ್‌ನಲ್ಲಿ ಇಂಡೋ-ಪಾಕ್ ಹೈವೋಲ್ಟೇಜ್ ಕದನ ಅನುಮಾನ!



















