ದಾವಣಗೆರೆ : ಚಿಗಟೇರಿ ಜಿಲ್ಲಾಸ್ಪತ್ರೆಯ ಆಪರೇಷನ್ ಥಿಯೇಟರ್ನಲ್ಲಿ ಆಕ್ಸಿಜನ್ ಸಿಲಿಂಡರ್ ಸ್ಫೋಟಗೊಂಡ ಘಟನೆ ನಡೆದಿದೆ. ಏಕಾಏಕಿ ಸ್ಫೋಟದಿಂದ ಬೆಂಕಿ ಹೊತ್ತಿಕೊಂಡಿದ್ದು, ಆಪರೇಷನ್ ಥಿಯೇಟರ್ನಲ್ಲಿದ್ದ ಕೋಟ್ಯಂತರ ರೂಪಾಯಿ ಮೌಲ್ಯದ ವೈದ್ಯಕೀಯ ಸಲಕರಣೆಗಳು ಸುಟ್ಟು ಕರಕಲಾಗಿವೆ.

ಆಪರೇಷನ್ ಥಿಯೇಟರ್ ಸುತ್ತಮುತ್ತಲಿನ ಇತರೆ ಕೊಠಡಿಗಳು ಕೂಡ ಬೆಂಕಿಗಾಹುತಿಯಾಗಿದೆ. ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಅರೋಗ್ಯ ಇಲಾಖೆ ಸಿಬ್ಬಂದಿ ಹೊರ ಓಡಿ ಬಂದಿದ್ದಾರೆ. ಸುದ್ದಿ ತಿಳಿದು ಸ್ಥಳಕ್ಕೆ ಬಂದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದೆ. ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಆರೋಗ್ಯ ಇಲಾಖೆ ಸಿಬ್ಬಂದಿ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಘಟನೆ ನಡೆದಾಗ ಏಳೆಂಟು ಜನ ಸಿಬ್ಬಂದಿ ಮಾತ್ರ ಇದ್ದೆವು. ಏಕಾಏಕಿ ಸ್ಪಾರ್ಕ್ ಕಾಣಿಸಿಕೊಂಡಿತು. ಕೂಡಲೇ ಮುಂಜಾಗ್ರತಾ ಕ್ರಮ ತೆಗೆದುಕೊಂಡೆವು. ಅಗ್ನಿಶಾಮಕ ಸಿಬ್ಬಂದಿಗೆ ಮಾಹಿತಿ ಕೂಡ ನೀಡಿದೆವು. ಅದೃಷ್ಟವಶಾತ್ ಯಾವುದೇ ರೋಗಿ ಆಪರೇಷನ್ ಥಿಯೇಟರ್ನಲ್ಲಿ ಇರಲಿಲ್ಲ. ಹಾಗಾಗಿ ಅವಘಡವೊಂದು ತಪ್ಪಿದೆ. ಕೂಡಲೇ ನಾವು ಹೊರಬಂದೆವು. ನಿಜಕ್ಕೂ ಮರುಜೀವ ಪಡೆಯುವಂತಾಗಿದೆ ಎಂದು ಅರೋಗ್ಯ ಇಲಾಖೆ ಸಿಬ್ಬಂದಿ ಆತಂಕ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ : ಪತಿಯ ಫ್ರೆಂಡ್ ಜೊತೆಯೇ ಓಡಿಹೋದ ಪತ್ನಿ – ಆಕ್ರೋಶಗೊಂಡ ಮಹಿಳೆ ಕುಟುಂಬಸ್ಥರಿಂದ ಯುವಕನ ಮನೆ ಧ್ವಂಸ!


















