ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಡ್ರೀಮ್ & ಡೀಲ್ಸ್ ಕಂಪನಿ ವಿರುದ್ಧ ಸರ್ಕಾರದ ದೊಡ್ಡ ಕ್ರಮ ; ದಿನೇಶ್ ಕಲ್ಲಹಳ್ಳಿ ದೂರಿನ ಬೆನ್ನಲ್ಲೇ ತನಿಖೆಗೆ ಆದೇಶ!

June 30, 2026
Share on WhatsappShare on FacebookShare on Twitter

ಬೆಂಗಳೂರು : ಡ್ರೀಮ್ & ಡೀಲ್ಸ್ ಇಂಟರ್‌ನ್ಯಾಷನಲ್ ಪ್ರೈವೇಟ್ ಲಿಮಿಟೆಡ್ ಕಂಪನಿ ವಿರುದ್ಧ ರಾಜ್ಯ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದೆ. ಕಂಪನಿಯು ವಂಚನೆ ನಡೆಸಿ ಠೇವಣಿದಾರರಿಗೆ ಹಣವನ್ನು ಹಿಂತಿರುಗಿಸಲು ವಿಫಲವಾಗಿದೆ ಎಂಬ ಆರೋಪಗಳ ಹಿನ್ನೆಲೆ, ಕರ್ನಾಟಕ ಠೇವಣಿದಾರರ ಹಿತಾಸಕ್ತಿ ಸಂರಕ್ಷಣಾ ಕಾಯ್ದೆ–2004ರ ಅಡಿಯಲ್ಲಿ ಸರ್ಕಾರ ಅಧಿಕೃತವಾಗಿ ಕ್ರಮ ಆರಂಭಿಸಿದೆ. ಈ ಕುರಿತು ಜೂನ್ 24ರಂದು ಅಧಿಸೂಚನೆ ಹೊರಡಿಸಲಾಗಿದೆ.

ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ಸರ್ಕಾರಕ್ಕೆ ಸಲ್ಲಿಸಿದ ದೂರಿನಲ್ಲಿ, ಡ್ರೀಮ್ & ಡೀಲ್ಸ್ ಕಂಪನಿ ಡೈರೆಕ್ಟ್ ಸೆಲ್ಲಿಂಗ್ ಕಂಪನಿಯಾಗಿ ನೋಂದಾಯಿತವಾಗಿದ್ದರೂ, ವಾಸ್ತವದಲ್ಲಿ ಡೈರೆಕ್ಟ್ ಸೆಲ್ಲಿಂಗ್‌ನ ಮೂಲ ನಿಯಮಗಳಿಗೆ ವಿರುದ್ಧವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಆರೋಪಿಸಿದ್ದರು. ಉತ್ಪನ್ನಗಳ ಮಾರಾಟಕ್ಕಿಂತ ಹೊಸ ಸದಸ್ಯರನ್ನು ಸೇರಿಸುವುದರ ಮೇಲೆಯೇ ಕಂಪನಿ ಹೆಚ್ಚು ಒತ್ತು ನೀಡುತ್ತಿದೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದರು.

ಇನ್ನು, ಹೊಸ ಸದಸ್ಯರಿಂದ ಹಣ ಹೂಡಿಕೆ ಮಾಡಿಸಿ, ಅವರು ಮತ್ತಷ್ಟು ಸದಸ್ಯರನ್ನು ಸೇರಿಸಿದರೆ ಕಮಿಷನ್ ಹಾಗೂ ಪ್ರೋತ್ಸಾಹಧನ ನೀಡುವ ಹಣಕಾಸು ಸರಪಳಿ ವ್ಯವಸ್ಥೆಯನ್ನು ಕಂಪನಿ ನಡೆಸುತ್ತಿದೆ ಎಂದು ದಿನೇಶ್ ಕಲ್ಲಹಳ್ಳಿ ಆರೋಪಿಸಿದ್ದರು. ಇದು ಸಾಮಾನ್ಯ ವ್ಯವಹಾರವಲ್ಲ, ಸದಸ್ಯರನ್ನು ಸೇರಿಸಿ ಹಣ ಸಂಗ್ರಹಿಸುವ ಮಾದರಿಯಾಗಿದೆ ಎಂದು ಅವರು ಸರ್ಕಾರದ ಗಮನಕ್ಕೆ ತಂದಿದ್ದರು.

ಇದರ ಜೊತೆಗೆ, ‘ಸೇವಿಂಗ್ ಸ್ಕೀಮ್’, ‘ಮಾಸಿಕ ಠೇವಣಿ ಯೋಜನೆ’, ‘ಉಳಿತಾಯ ಯೋಜನೆ’, ‘ಭವಿಷ್ಯದ ಬಹುಮಾನ ಯೋಜನೆ’ ಎಂಬ ಹೆಸರಿನಲ್ಲಿ ಸಾರ್ವಜನಿಕರಿಂದ ಹಣ ಸಂಗ್ರಹಿಸಲಾಗುತ್ತಿದೆ ಎಂದು ದಿನೇಶ್ ಕಲ್ಲಹಳ್ಳಿ ದೂರಿನಲ್ಲಿ ತಿಳಿಸಿದ್ದರು. ಕಂಪನಿಯ ನೋಂದಣಿ ಉದ್ದೇಶ, ಹಣಕಾಸು ವ್ಯವಹಾರ, ಸದಸ್ಯತ್ವ ಆಧಾರಿತ ಕಮಿಷನ್ ವ್ಯವಸ್ಥೆ ಹಾಗೂ ಸಾರ್ವಜನಿಕರಿಂದ ಸಂಗ್ರಹಿಸಿದ ಹಣದ ಮೂಲ ಮತ್ತು ಬಳಕೆಯ ಕುರಿತು ಸಮಗ್ರ ತನಿಖೆ ನಡೆಸಬೇಕೆಂದು ಅವರು ಸರ್ಕಾರವನ್ನು ಆಗ್ರಹಿಸಿದ್ದರು.

ಕಂಪನಿಯ ಈ ವ್ಯವಹಾರ ಮಾದರಿಯು Companies Act, 2013, Unregulated Deposit Schemes (Banning) Act, 2019, *Prize Chits and Money Circulation Schemes (Banning) Act, 1978 ಸೇರಿದಂತೆ ಹಲವು ಹಣಕಾಸು ಕಾನೂನುಗಳ ಉಲ್ಲಂಘನೆಯಾಗಿರುವ ಸಾಧ್ಯತೆ ಇದೆ ಎಂಬ ಅಂಶವನ್ನೂ ದೂರಿನಲ್ಲಿ ಉಲ್ಲೇಖಿಸಲಾಗಿತ್ತು.

ದಿನೇಶ್ ಕಲ್ಲಹಳ್ಳಿ ಸಲ್ಲಿಸಿದ ದೂರಿನ ಬೆನ್ನಲ್ಲೇ ರಾಜ್ಯ ಸರ್ಕಾರ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಕ್ರಮ ಕೈಗೊಂಡಿದೆ. ಕಂಪನಿಯ ವಿರುದ್ಧ ಕಾನೂನು ಪ್ರಕ್ರಿಯೆ ಆರಂಭಿಸಿ, ಠೇವಣಿದಾರರ ಹಿತಾಸಕ್ತಿ ಕಾಪಾಡಲು ಮುಂದಾಗಿದೆ. ಕಂಪನಿಯ ಆಸ್ತಿಗಳು ವಿವಿಧ ಜಿಲ್ಲೆಗಳಲ್ಲಿ ಹಾಗೂ ರಾಜ್ಯದ ಹೊರಗೂ ಇರಬಹುದಾದ ಹಿನ್ನೆಲೆ, ತನಿಖೆಯನ್ನು ಒಂದೇ ಪ್ರಾಧಿಕಾರದ ಮೂಲಕ ನಡೆಸಲು ಸರ್ಕಾರ ನಿರ್ಧರಿಸಿದೆ. ಎಲ್ಲಾ ಠೇವಣಿದಾರರ ಮಾಹಿತಿಯನ್ನು ಒಂದೇ ಸ್ಥಳದಲ್ಲಿ ಸಂಗ್ರಹಿಸಿ ಮುಂದಿನ ಕ್ರಮ ಕೈಗೊಳ್ಳುವ ಉದ್ದೇಶದಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ.

ಈ ಹಿನ್ನೆಲೆ ರಾಮನಗರ ಉಪವಿಭಾಗದ ಸಹಾಯಕ ಆಯುಕ್ತರನ್ನು ಈ ಪ್ರಕರಣದ ಸಮರ್ಥ ಪ್ರಾಧಿಕಾರಿ (Competent Authority)ಯಾಗಿ ನೇಮಕ ಮಾಡಲಾಗಿದೆ. ಕಂಪನಿಯ ಆಸ್ತಿಗಳ ಪತ್ತೆ, ಸಾರ್ವಜನಿಕರಿಂದ ಸಂಗ್ರಹಿಸಿದ ಹಣದ ವಿವರ, ಠೇವಣಿದಾರರ ಹಕ್ಕು ಹಾಗೂ ಹಣ ಮರುಪಾವತಿ ಸಂಬಂಧಿತ ಎಲ್ಲಾ ಪ್ರಕ್ರಿಯೆಗಳನ್ನು ಈ ಪ್ರಾಧಿಕಾರ ಮುಂದುವರಿಸಲಿದೆ.

ಇದನ್ನೂ ಓದಿ : ಬೆಂಗಳೂರು ರಸ್ತೆ ಅಭಿವೃದ್ಧಿಗೆ ರಿಲೀಸ್‌ ಆದ ಕೋಟಿ ಕೋಟಿ ಹಣ ಎಲ್ಲೋಯ್ತು? – ತನಿಖೆಗೆ N.R ರಮೇಶ್‌ ಆಗ್ರಹ!

Tags: bengaloreKarnataka News beat
SendShareTweet
Previous Post

ವಿಶ್ವಕಪ್ ನಿರಾಸೆಯ ಮಧ್ಯೆ 2028ರ ಒಲಿಂಪಿಕ್ಸ್‌ಗೆ ಲಗ್ಗೆಯಿಟ್ಟ ಭಾರತ ಮಹಿಳಾ ಕ್ರಿಕೆಟ್ ತಂಡ

Next Post

ಪುಣೆ ಉದ್ಯಮಿ ಕೊಲೆ ಕೇಸ್ : ಸಿಯಾ ಸಹೋದರನಿಗೇ 10 ಕೋಟಿ ರೂ. ಮಾನನಷ್ಟ ನೊಟೀಸ್ ಜಾರಿ

Related Posts

ವಾಟ್ಸ್ಆ್ಯಪ್ ಯೂಸರ್‌ನೇಮ್ ಫೀಚರ್ : ಇನ್ನು ಫೋನ್ ನಂಬರ್ ಹಂಚಿಕೊಳ್ಳುವ ಅಗತ್ಯವಿಲ್ಲ, ಗೌಪ್ಯತೆಗೆ ಹೆಚ್ಚಿನ ಆದ್ಯತೆ!
ತಂತ್ರಜ್ಞಾನ

ವಾಟ್ಸ್ಆ್ಯಪ್ ಯೂಸರ್‌ನೇಮ್ ಫೀಚರ್ : ಇನ್ನು ಫೋನ್ ನಂಬರ್ ಹಂಚಿಕೊಳ್ಳುವ ಅಗತ್ಯವಿಲ್ಲ, ಗೌಪ್ಯತೆಗೆ ಹೆಚ್ಚಿನ ಆದ್ಯತೆ!

ಪತಿಯ ಅನೈತಿಕ ಸಂಬಂಧ ಪ್ರಶ್ನಿಸಿದ್ದಕ್ಕೆ ರಾಡ್‌ನಿಂದ ಹಲ್ಲೆ- ಪತ್ನಿ ಸಾವು!
ಬೀದರ್

ಪತಿಯ ಅನೈತಿಕ ಸಂಬಂಧ ಪ್ರಶ್ನಿಸಿದ್ದಕ್ಕೆ ರಾಡ್‌ನಿಂದ ಹಲ್ಲೆ- ಪತ್ನಿ ಸಾವು!

ಬಾಕಿ ಇರುವ 37 ಸಾವಿರ ಕೋಟಿ ರೂ. ಬಿಲ್‌ ಬಿಡುಗಡೆ ಮಾಡಿ – ಸಿಎಂ ಡಿಕೆಶಿಗೆ ರಾಜ್ಯ ಗುತ್ತಿಗೆದಾರರ ಸಂಘ ಮನವಿ!
ಬೆಂಗಳೂರು

ಬಾಕಿ ಇರುವ 37 ಸಾವಿರ ಕೋಟಿ ರೂ. ಬಿಲ್‌ ಬಿಡುಗಡೆ ಮಾಡಿ – ಸಿಎಂ ಡಿಕೆಶಿಗೆ ರಾಜ್ಯ ಗುತ್ತಿಗೆದಾರರ ಸಂಘ ಮನವಿ!

ಚಾಮರಾಜಪೇಟೆಯಲ್ಲಿ SIR ಆರಂಭಕ್ಕೂ ಮುನ್ನವೇ ಕಾಂಗ್ರೆಸ್-ಬಿಜೆಪಿ ಜಟಾಪಟಿ!
ಬೆಂಗಳೂರು

ಚಾಮರಾಜಪೇಟೆಯಲ್ಲಿ SIR ಆರಂಭಕ್ಕೂ ಮುನ್ನವೇ ಕಾಂಗ್ರೆಸ್-ಬಿಜೆಪಿ ಜಟಾಪಟಿ!

ಬೆಂಗಳೂರು ರಸ್ತೆ ಅಭಿವೃದ್ಧಿಗೆ ರಿಲೀಸ್‌ ಆದ ಕೋಟಿ ಕೋಟಿ ಹಣ ಎಲ್ಲೋಯ್ತು? – ತನಿಖೆಗೆ N.R ರಮೇಶ್‌ ಆಗ್ರಹ!
ಬೆಂಗಳೂರು

ಬೆಂಗಳೂರು ರಸ್ತೆ ಅಭಿವೃದ್ಧಿಗೆ ರಿಲೀಸ್‌ ಆದ ಕೋಟಿ ಕೋಟಿ ಹಣ ಎಲ್ಲೋಯ್ತು? – ತನಿಖೆಗೆ N.R ರಮೇಶ್‌ ಆಗ್ರಹ!

ದಾವಣಗೆರೆ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಸಿಲಿಂಡರ್ ಸ್ಫೋಟ – ತಪ್ಪಿದ ಭಾರೀ ದುರಂತ!
ದಾವಣಗೆರೆ

ದಾವಣಗೆರೆ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಸಿಲಿಂಡರ್ ಸ್ಫೋಟ – ತಪ್ಪಿದ ಭಾರೀ ದುರಂತ!

Next Post
ಪುಣೆ ಉದ್ಯಮಿ ಕೊಲೆ ಕೇಸ್ : ಸಿಯಾ ಸಹೋದರನಿಗೇ 10 ಕೋಟಿ ರೂ. ಮಾನನಷ್ಟ ನೊಟೀಸ್ ಜಾರಿ

ಪುಣೆ ಉದ್ಯಮಿ ಕೊಲೆ ಕೇಸ್ : ಸಿಯಾ ಸಹೋದರನಿಗೇ 10 ಕೋಟಿ ರೂ. ಮಾನನಷ್ಟ ನೊಟೀಸ್ ಜಾರಿ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ವಾಟ್ಸ್ಆ್ಯಪ್ ಯೂಸರ್‌ನೇಮ್ ಫೀಚರ್ : ಇನ್ನು ಫೋನ್ ನಂಬರ್ ಹಂಚಿಕೊಳ್ಳುವ ಅಗತ್ಯವಿಲ್ಲ, ಗೌಪ್ಯತೆಗೆ ಹೆಚ್ಚಿನ ಆದ್ಯತೆ!

ವಾಟ್ಸ್ಆ್ಯಪ್ ಯೂಸರ್‌ನೇಮ್ ಫೀಚರ್ : ಇನ್ನು ಫೋನ್ ನಂಬರ್ ಹಂಚಿಕೊಳ್ಳುವ ಅಗತ್ಯವಿಲ್ಲ, ಗೌಪ್ಯತೆಗೆ ಹೆಚ್ಚಿನ ಆದ್ಯತೆ!

ಪ್ರಿಯತಮೆಗಾಗಿ ಇಸ್ಲಾಂಗೆ ಮತಾಂತರವಾಗಿದ್ದ ಉತ್ತರ ಪ್ರದೇಶದ ಯುವಕ ಮತ್ತೆ ಹಿಂದೂ ಧರ್ಮಕ್ಕೆ!

ಪ್ರಿಯತಮೆಗಾಗಿ ಇಸ್ಲಾಂಗೆ ಮತಾಂತರವಾಗಿದ್ದ ಉತ್ತರ ಪ್ರದೇಶದ ಯುವಕ ಮತ್ತೆ ಹಿಂದೂ ಧರ್ಮಕ್ಕೆ!

ಇಂಗ್ಲೆಂಡ್ ಕ್ರಿಕೆಟ್ ತರಬೇತಿ : ಟೀಕೆಗಳ ನಡುವೆಯೂ ಭವಿಷ್ಯದ ಬಗ್ಗೆ ಸ್ಪಷ್ಟನೆ ನೀಡಿದ ಮೆಕಲಮ್

ಇಂಗ್ಲೆಂಡ್ ಕ್ರಿಕೆಟ್ ತರಬೇತಿ : ಟೀಕೆಗಳ ನಡುವೆಯೂ ಭವಿಷ್ಯದ ಬಗ್ಗೆ ಸ್ಪಷ್ಟನೆ ನೀಡಿದ ಮೆಕಲಮ್

ಆರೋಗ್ಯ ಸೇತು 2.0ಗೆ ಕೇಂದ್ರ ಸರ್ಕಾರ ಚಾಲನೆ : ಸಾರ್ವಜನಿಕರಿಗೆ ಏನಿವೆ ಉಪಯೋಗಗಳು?

ಆರೋಗ್ಯ ಸೇತು 2.0ಗೆ ಕೇಂದ್ರ ಸರ್ಕಾರ ಚಾಲನೆ : ಸಾರ್ವಜನಿಕರಿಗೆ ಏನಿವೆ ಉಪಯೋಗಗಳು?

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ವಾಟ್ಸ್ಆ್ಯಪ್ ಯೂಸರ್‌ನೇಮ್ ಫೀಚರ್ : ಇನ್ನು ಫೋನ್ ನಂಬರ್ ಹಂಚಿಕೊಳ್ಳುವ ಅಗತ್ಯವಿಲ್ಲ, ಗೌಪ್ಯತೆಗೆ ಹೆಚ್ಚಿನ ಆದ್ಯತೆ!

ವಾಟ್ಸ್ಆ್ಯಪ್ ಯೂಸರ್‌ನೇಮ್ ಫೀಚರ್ : ಇನ್ನು ಫೋನ್ ನಂಬರ್ ಹಂಚಿಕೊಳ್ಳುವ ಅಗತ್ಯವಿಲ್ಲ, ಗೌಪ್ಯತೆಗೆ ಹೆಚ್ಚಿನ ಆದ್ಯತೆ!

ಪ್ರಿಯತಮೆಗಾಗಿ ಇಸ್ಲಾಂಗೆ ಮತಾಂತರವಾಗಿದ್ದ ಉತ್ತರ ಪ್ರದೇಶದ ಯುವಕ ಮತ್ತೆ ಹಿಂದೂ ಧರ್ಮಕ್ಕೆ!

ಪ್ರಿಯತಮೆಗಾಗಿ ಇಸ್ಲಾಂಗೆ ಮತಾಂತರವಾಗಿದ್ದ ಉತ್ತರ ಪ್ರದೇಶದ ಯುವಕ ಮತ್ತೆ ಹಿಂದೂ ಧರ್ಮಕ್ಕೆ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat