ಚಿತ್ರದುರ್ಗ : ಜಿಲ್ಲೆಯಲ್ಲಿ ಉಪ ವಲಯ ಅರಣ್ಯಾಧಿಕಾರಿ ಏಕಾಏಕಿ ಕುಸಿದು ಬಿದ್ದು ಮೃತಪಟ್ಟಿರುವ ದುರ್ಘಟನೆ ನಡೆದಿದೆ. (DRFO) ವೆಂಕಟೇಶ್ (36) ಮೃತ ಅರಣ್ಯಾಧಿಕಾರಿ ಎಂದು ತಿಳಿದುಬಂದಿದೆ.
ಚಿತ್ರದುರ್ಗ ನಗರದ ಜೋಗಿಮಟ್ಟಿ ರಸ್ತೆಯಲ್ಲಿರುವ ತಮ್ಮ ಮನೆಯಲ್ಲೇ ವೆಂಕಟೇಶ್ ಅವರು ಏಕಾಏಕಿ ಕುಸಿದು ಬಿದ್ದಿದ್ದು, ತಕ್ಷಣ ಆಸ್ಪತ್ರೆಗೆ ಕರೆದೊಯ್ಯುವ ಪ್ರಯತ್ನ ನಡೆದರೂ ಅವರು ಬದುಕುಳಿಯಲಿಲ್ಲ ಎನ್ನಲಾಗಿದೆ.
ವೆಂಕಟೇಶ್ ಅವರು ಚಿತ್ರದುರ್ಗ ಉಪ ವಲಯ ಅರಣ್ಯಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದು, ಇತ್ತೀಚೆಗಷ್ಟೇ ಹಿರಿಯೂರು ವಲಯಕ್ಕೆ ವರ್ಗಾವಣೆಯಾಗಿದ್ದರು. ಮೂಲತಃ ಯಾದಗಿರಿ ಜಿಲ್ಲೆಯ ಸುರಪುರದವರಾಗಿದ್ದ ವೆಂಕಟೇಶ್ ಅವರ ಅಕಾಲಿಕ ನಿಧನ ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ಬಂಧು-ಬಳಗದಲ್ಲಿ ಶೋಕದ ವಾತಾವರಣ ನಿರ್ಮಿಸಿದೆ.
ಇದನ್ನೂ ಓದಿ : ಹುಣಸೂರು ಶಾಸಕ ಜಿ.ಡಿ. ಹರೀಶ್ ಗೌಡ ಪತ್ನಿಗೆ ಅಶ್ಲೀಲ ಕಮೆಂಟ್ ; ದೂರು ದಾಖಲು


















