ಬಾಗಲಕೋಟೆ : ಜಿಲ್ಲೆಯ ಹುನಗುಂದ ತಾಲೂಕಿನ ಕಂದಗಲ್ ಗ್ರಾಮದ ಹೊರವಲಯದಲ್ಲಿ ಕಾಲೇಜು ವಿದ್ಯಾರ್ಥಿಗಳ ನಡುವಿನ ಗಲಾಟೆ ಗಂಭೀರ ಸ್ವರೂಪ ಪಡೆದುಕೊಂಡಿದ್ದು, ಓರ್ವ ಬಾಲಕನನ್ನು ಐವರು ಸೇರಿ ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ಬೆಳಕಿಗೆ ಬಂದಿದೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಕಾಲೇಜಿಗೆ ಬಸ್‌ನಲ್ಲಿ ತೆರಳುವ ವೇಳೆ ಕ್ಷುಲ್ಲಕ ಕಾರಣಕ್ಕೆ ವಿದ್ಯಾರ್ಥಿಗಳ ನಡುವೆ ಮಾತಿನ ಚಕಮಕಿ ನಡೆದಿತ್ತು. ಬಳಿಕ ಓರ್ವ ಬಾಲಕನನ್ನು ಊರಿನ ಹೊರವಲಯಕ್ಕೆ ಕರೆದುಕೊಂಡು ಹೋಗಿ ಐವರು ಸೇರಿ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.
ಹಲ್ಲೆ ವೇಳೆ ಬಾಲಕ ಎಷ್ಟೇ ಬೇಡಿಕೊಂಡರೂ ಬಿಡದೆ ನಿರಂತರವಾಗಿ ಥಳಿಸಿರುವ ದೃಶ್ಯಗಳು ವೈರಲ್ ವಿಡಿಯೋದಲ್ಲಿ ಕಂಡುಬಂದಿದ್ದು, ಘಟನೆ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.
ಜೂನ್ 10ರಂದು ನಡೆದಿದ್ದ ಈ ಘಟನಾ ಸಂಬಂಧ ಇಳಕಲ್ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಇದನ್ನೂ ಓದಿ : ಢಾಕಾದಲ್ಲಿ ಹಿಂದೂ ಅರ್ಚಕ, ಕಾನೂನು ವಿದ್ಯಾರ್ಥಿಯ ಅಪಹರಣ ; ಸುಲಿಗೆಗಾಗಿ ನಗ್ನಗೊಳಿಸಿ ಚಿತ್ರಹಿಂಸೆ!


















