ರಾಮನಗರ : ಬೆಂಗಳೂರು ದಕ್ಷಿಣ ಜಿಲ್ಲೆಯ ತಾವರೆಕರೆ ಮಾದಪಟ್ಟಣ ಗ್ರಾಮದಲ್ಲಿ ಭೀಕರ ದುರಂತ ಸಂಭವಿಸಿದೆ. ಕಲ್ಲು ಕ್ವಾರಿಯಲ್ಲಿ ಕೆಲಸ ಮಾಡ್ತಿದ್ದ ವೇಳೆ ಬಂಡೆ ಕುಸಿದು ಏಳು ಮಂದಿ ಕಾರ್ಮಿಕರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಬಂಡೆ ಕೆಳಗೆ ಹಲವು ಕಾರ್ಮಿಕರು ಸಿಲುಕಿರುವ ಶಂಕೆ ವ್ಯಕ್ತವಾಗಿದ್ದು, ಸ್ಥಳಕ್ಕೆ ರಕ್ಷಣಾ ಸಿಬ್ಬಂದಿ ದೌಡಾಯಿಸಿದ್ದಾರೆ. ಮೇಲಿಂದ ಬಂಡೆ ಬಿದ್ದು ಏಳು ಮಂದಿ ಕಾರ್ಮಿಕರು ಸಾವನ್ನಪ್ಪಿದ್ರೆ, ಬಂಡೆ ಕೆಳಗೆ ಇನ್ನು ಹಲವು ಕಾರ್ಮಿಕರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ತಾವರೆಕರೆ ಪೊಲೀಸ್ ಠಾಣಾ ವ್ಯಾಪ್ತಿಯ ಮಾದಪಟ್ಟಣ ಗ್ರಾಮದಲ್ಲಿ ಈ ಘಟನೆ ನಡೆದಿದೆ.

ಕಾವೇರಿ ಕಂಪನಿಗೆ ಸೇರಿದ ಕ್ರಷರ್ನಲ್ಲಿ ದುರಂತ ಸಂಭವಿಸಿದ್ದು, ಇಂದು ಬೆಳಗ್ಗೆ 7.30ರ ಸುಮಾರಿಗೆ ಈ ಘಟನೆ ನಡೆದಿದೆ. ಎಂದಿನಂತೆ ಕೆಲಸ ಮಾಡ್ತಿದ್ದ ಕಾರ್ಮಿಕರ ಪಾಲಿಗೆ ಬಂಡೆ ಯಮನಾಗಿ ಬಂದಿದೆ. ಹಿಟಾಚಿಯಲ್ಲಿ ಕೆಲಸ ಮಾಡುವಾಗ ಬಂಡೆ ಕೆಳಗೆ ಬಿದ್ದಿದ್ದು, ಕಾರ್ಮಿಕರ ಮೇಲೆಯೇ ಬಿದ್ದು ಭಾರೀ ದುರಂತ ಸಂಭವಿಸಿದೆ. ಸ್ಥಳಕ್ಕೆ ತಾವರೆಕೆರೆ ಪೊಲೀಸ್ ಭೇಟಿ ಪರಿಶೀಲನೆ ನಡೆಸುತ್ತಿದ್ದಾರೆ. ಘಟನೆಯ ಕುರಿತು ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.
ಇದನ್ನೂ ಓದಿ : ಜಿಬಿಎ ಎಲೆಕ್ಷನ್‌ಗೆ ಸರ್ಕಾರದಿಂದ ಸಕಲ ಸಿದ್ಧತೆ.. ಆಗಸ್ಟ್ 30ರೊಳಗೆ ಚುನಾವಣೆ ನಡೆಸಲು ಕಸರತ್ತು!


















