ಬೆಂಗಳೂರು : ನೀವೇನಾದರೂ ಎಸ್ಸೆಸ್ಸೆಲ್ಸಿ ಕೋರ್ಸ್ ಮುಗಿಸಿದ್ದೀರಾ? ಬೆಂಗಳೂರಿನಲ್ಲೇ ಒಳ್ಳೆಯ ಉದ್ಯೋಗ ಪಡೆಯಲು ಬಯಸುತ್ತಿದ್ದೀರಾ? ಹಾಗಾದರೆ, ನಿಮಗೊಂದು ಸುವರ್ಣಾವಕಾಶ ದೊರೆತಿದೆ. ಬೆಂಗಳೂರು ಸಿವಿಲ್ ನ್ಯಾಯಾಲಯದಲ್ಲಿ ಖಾಲಿ ಇರುವ 88 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಪ್ಯೂನ್ ಹಾಗೂ ಡ್ರೈವರ್ ಹುದ್ದೆಗಳನ್ನು ಭರ್ತಿ (Bengaluru Civil Court Recruitment 2026) ಮಾಡಿಕೊಳ್ಳಲಾಗುತ್ತಿದೆ. ಅಭ್ಯರ್ಥಿಗಳಿಗೆ ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ.
ನೇಮಕಾತಿ ಸಂಸ್ಥೆ: ಬೆಂಗಳೂರು ಸಿವಿಲ್ ನ್ಯಾಯಾಲಯ
ಹುದ್ದೆಗಳ ಹೆಸರು: ಡ್ರೈವರ್, ಪ್ಯೂನ್
ಹುದ್ದೆಗಳ ಸಂಖ್ಯೆ: 88
ಉದ್ಯೋಗ ಸ್ಥಳ: ಬೆಂಗಳೂರು
ಅರ್ಜಿ ಸಲ್ಲಿಸುವ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಜುಲೈ 30
81 ಪ್ಯೂನ್ ಹಾಗೂ 7 ಡ್ರೈವರ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅರ್ಜಿ ಸಲ್ಲಿಸಲು ಬಯಸುವವರು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಎಸ್ಸೆಸ್ಸೆಲ್ಸಿ ಮುಗಿಸಿರಬೇಕು. ಹಾಗೆಯೇ, ಚಾಲಕ ಹುದ್ದೆಗೆ ಅರ್ಜಿ ಸಲ್ಲಿಸುವವರ ಬಳಿ ವಾಹನ ಚಾಲನಾ ಪರವಾನಗಿ ಅಥವಾ ಡ್ರೈವಿಂಗ್ ಲೈಸೆನ್ಸ್ ಇರಬೇಕು ಎಂದು ತಿಳಿಸಲಾಗಿದೆ. ಅರ್ಜಿ ಸಲ್ಲಿಸುವವರಿಗೆ ಗರಿಷ್ಠ 40 ವರ್ಷಗಳ ವಯೋಮಿತಿ ಇದೆ. ನೇಮಕಾತಿ ಹೊಂದಿದವರಿಗೆ ಆಯಾ ಹುದ್ದೆಗಳಿಗೆ ಅನುಗುಣವಾಗಿ 67 ಸಾವಿರ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ.
ವಾಹನ ಚಾಲನಾ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮೊದಲಿಗೆ bengaluru.dcourts.gov.in ವೆಬ್ ಸೈಟ್ ಗೆ ಭೇಟಿ ನೀಡಬೇಕು. ಅಗತ್ಯ ದಾಖಲೆಗಳನ್ನು ಸಿದ್ಧಪಡಿಸಿಕೊಳ್ಳಬೇಕು. ಆನ್ ಲೈನ್ ಮೂಲಕವೇ ಅರ್ಜಿ ಭರ್ತಿ ಮಾಡಿ, ಅಗತ್ಯ ದಾಖಲೆಗಳೊಂದಿಗೆ ಅಪ್ ಲೋಡ್ ಮಾಡಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಇದನ್ನೂ ಓದಿ : ಡಿಗ್ರಿ, ಡಿಪ್ಲೋಮಾ ಮುಗಿಸಿದವರಿಗೆ ಗುಡ್ ನ್ಯೂಸ್ : ಕೇಂದ್ರ ಸರ್ಕಾರದ NCBS ಸಂಸ್ಥೆಯಲ್ಲಿ ನೇಮಕಾತಿ!



















