ಬೆಂಗಳೂರು : ರಾಜ್ಯದ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡು ಇಂದಿಗೆ ಒಂದು ತಿಂಗಳು ಪೂರ್ಣಗೊಳಿಸಿರುವ ಡಿ.ಕೆ ಶಿವಕುಮಾರ್ ಅವರು, ಆಡಳಿತಾತ್ಮಕ ನಿರ್ಧಾರಗಳು, ಅಭಿವೃದ್ಧಿ ಯೋಜನೆಗಳು ಮತ್ತು ರಾಜಕೀಯ ತಂತ್ರಗಳ ಮೂಲಕ ಗಮನ ಸೆಳೆದಿದ್ದಾರೆ.
ಜೂನ್ 3ರಂದು ಮುಖ್ಯಮಂತ್ರಿ ಆಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ, ಮೊದಲ ದಿನವೇ ಸಚಿವ ಸಂಪುಟ ಸಭೆ ನಡೆಸುವ ಮೂಲಕ ಆಡಳಿತಕ್ಕೆ ವೇಗ ನೀಡಿದ್ದರು.
ಒಂದು ತಿಂಗಳಿನಲ್ಲಿ ಸಿಎಂ ಡಿಕೆಶಿಯ ಕಾರ್ಯಸಾಧನೆಯೇನು?
- ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವ ಮಹತ್ವದ ತೀರ್ಮಾನ.
- ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಕುರಿತು ಸರ್ಕಾರದ ಸ್ವಂತ ನಿಲುವು.
- ರಾಜ್ಯಕ್ಕೆ ಬರಬೇಕಿದ್ದ ಕೇಂದ್ರ ಅನುದಾನ ಹಾಗೂ ವಿವಿಧ ಯೋಜನೆಗಳಿಗಾಗಿ ಪ್ರಧಾನಮಂತ್ರಿಗೆ ಮನವಿ.
- ವಿಧಾನ ಪರಿಷತ್ ಚುನಾವಣೆಯಲ್ಲಿ ಸಮರ್ಥ ರಣತಂತ್ರ ರೂಪಿಸಿ ಕಾಂಗ್ರೆಸ್‌ನ 5ನೇ ಅಭ್ಯರ್ಥಿಯನ್ನು ಗೆಲ್ಲಿಸುವಲ್ಲಿ ಯಶಸ್ಸು.
- ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ನೀತಿ ಆಯೋಗದ ಸಭೆಯಲ್ಲಿ ರಾಜ್ಯದ ಪರವಾಗಿ ಭಾಗವಹಿಸಿ ಹಲವು ವಿಷಯಗಳ ಪ್ರಸ್ತಾಪ.
- ಬಿಡದಿ ಟೌನ್‌ಶಿಪ್ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿಗೆ ಬಹಿರಂಗ ಚರ್ಚೆಗೆ ಆಹ್ವಾನ.
- ಸಾರ್ವಜನಿಕರ ಅಹವಾಲುಗಳ ತ್ವರಿತ ಪರಿಹಾರಕ್ಕಾಗಿ ‘ಪ್ರಜಾಸೇವೆ’ ಇಲಾಖೆಯ ಸ್ಥಾಪನೆ.
- ಆಡಳಿತದಲ್ಲಿ ಪಾರದರ್ಶಕತೆ ಮತ್ತು ಶಿಸ್ತು ತರಲು ಅಧಿಕಾರಿಗಳು ಬೆಳಿಗ್ಗೆ 10 ಗಂಟೆಗೆ ಕಡ್ಡಾಯವಾಗಿ ಲಾಗಿನ್ ಆಗುವಂತೆ ಸೂಚನೆ.
- ತುಂಗಭದ್ರಾ ಅಣೆಕಟ್ಟಿನ ಗೇಟ್‌ಗಳ ಉದ್ಘಾಟನೆ ಮೂಲಕ ನೀರಾವರಿ ನಿರ್ವಹಣೆಗೆ ಒತ್ತು.
- ಮೇಕೆದಾಟು ಯೋಜನೆ ವಿಚಾರದಲ್ಲಿ ರಾಜ್ಯದ ಹಿತಾಸಕ್ತಿ ಕಾಪಾಡುವ ನಿಟ್ಟಿನಲ್ಲಿ ಗಟ್ಟಿ ನಿಲುವು ಪ್ರದರ್ಶನ.
ಇದನ್ನೂ ಓದಿ : ಬೀದಿ ಬದಿ ವ್ಯಾಪಾರಿಗಳ ಸ್ಥಳಾಂತರಕ್ಕೆ ಸರ್ಕಾರದ ಸ್ಪಷ್ಟನೆ : ಜು.10 ರಿಂದ ಅನಾಥ ವಾಹನಗಳ ತೆರವು ಕಾರ್ಯ!


















