ಬಳ್ಳಾರಿ : ಜಿಲ್ಲೆಯ ಸಂಡೂರು ತಾಲೂಕಿನ ಸೋವೇನಹಳ್ಳಿ ಗ್ರಾಮದಲ್ಲಿರುವ ಸಾರ್ವಜನಿಕ ಶೌಚಾಲಯ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸಾಕ್ಷಿಯಾಗಿದ್ದು, ಉದ್ಘಾಟನೆಯಾಗಿ ಕೇವಲ ಒಂದೇ ವರ್ಷಕ್ಕೆ ಶೌಚಾಲಯ ಬಳಕೆಗೆ ಬಾರದಂತಾಗಿ ಪಾಳು ಬಿದ್ದಿದೆ.

ನೀರು ಮತ್ತು ವಿದ್ಯುತ್ ವ್ಯವಸ್ಥೆಯ ಕೊರತೆಯಿಂದ ಶೌಚಾಲಯ ಸಂಪೂರ್ಣ ಸ್ಥಗಿತಗೊಂಡಿದ್ದು, ಸುತ್ತಮುತ್ತ ಗಿಡ-ಗಂಟಿಗಳು ಬೆಳೆದು ಕಟ್ಟಡವೇ ಕಾಣದಂತಾಗಿದೆ. ಗ್ರಾಮ ಪಂಚಾಯಿತಿ ಕಚೇರಿಯ ಪಕ್ಕದಲ್ಲೇ ಶೌಚಾಲಯ ಇದ್ದರೂ, ಅದರ ನಿರ್ವಹಣೆಯತ್ತ ಅಧಿಕಾರಿಗಳು ಗಮನ ಹರಿಸಿಲ್ಲ ಎಂಬ ಆರೋಪ ಕೇಳಿಬಂದಿದೆ.
ಶೌಚಾಲಯ ಬಳಕೆಗೆ ಲಭ್ಯವಿಲ್ಲದ ಕಾರಣ ಮಹಿಳೆಯರು ಸೇರಿದಂತೆ ಗ್ರಾಮಸ್ಥರು ಬಹಿರ್ದೆಸೆಗೆ ತೆರಳಬೇಕಾದ ಅನಿವಾರ್ಯ ಪರಿಸ್ಥಿತಿ ನಿರ್ಮಾಣವಾಗಿದೆ. ಸ್ವಚ್ಛ ಭಾರತ್ ಸೇರಿದಂತೆ ಸ್ವಚ್ಛತೆ ಕುರಿತು ಸರ್ಕಾರ ಜಾಗೃತಿ ಮೂಡಿಸುತ್ತಿರುವ ನಡುವೆಯೇ, ಮೂಲಭೂತ ಸೌಲಭ್ಯವೇ ನಿರ್ಲಕ್ಷ್ಯಕ್ಕೊಳಗಾಗಿರುವುದು ಗ್ರಾಮಸ್ಥರ ಆಕ್ರೋಶಕ್ಕೆ ಕಾರಣವಾಗಿದೆ.
ತಕ್ಷಣ ಶೌಚಾಲಯವನ್ನು ದುರಸ್ತಿಗೊಳಿಸಿ ನೀರು, ವಿದ್ಯುತ್ ಸೇರಿದಂತೆ ಅಗತ್ಯ ಮೂಲಸೌಕರ್ಯ ಕಲ್ಪಿಸಿ ಸಾರ್ವಜನಿಕ ಬಳಕೆಗೆ ಮುಕ್ತಗೊಳಿಸಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ. ನಿರ್ಲಕ್ಷ್ಯ ತೋರಿದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೂಡ ಒತ್ತಾಯಿಸಿದ್ದಾರೆ.
ಇದನ್ನೂ ಓದಿ : ಡಿಕೆಶಿ ಸಿಎಂ ಆಗಿ 1 ತಿಂಗಳು ಪೂರ್ಣ : 30 ದಿನದಲ್ಲಿ ‘ಟ್ರಬಲ್ ಶೂಟರ್’ ಕಾರ್ಯಸಾಧನೆಗಳೇನು?



















