ಹಾಸನ : ಬೆಂಗಳೂರಿನ ಕುಮಾರಸ್ವಾಮಿ ಲೇಔಟ್ ಠಾಣೆ ಪೊಲೀಸರು ಹಿಂದೂ ಕಾರ್ಯಕರ್ತ ಪುನೀತ್ ಕೆರೆಹಳ್ಳಿಯನ್ನು ಹಾಸನದಲ್ಲಿ ಬಂಧಿಸಿದ್ದಾರೆ.
ಅಬ್ದುಲ್ ರಜಾಕ್ ಎಂಬಾತ ನೀಡಿದ ದೂರಿನ ಆಧಾರದ ಮೇಲೆ, ಮೌಲ್ವಿಗಳ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.
ತಮ್ಮನ ಮದುವೆ ಕಾರ್ಯಕ್ರಮಕ್ಕೆ ಹಾಸನಕ್ಕೆ ತೆರಳಿದ್ದ ಪುನೀತ್ ಕೆರೆಹಳ್ಳಿಯನ್ನು ಮದುವೆ ಮನೆಯಿಂದಲೇ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಸದ್ಯ ಅವರನ್ನು ಬೆಂಗಳೂರಿಗೆ ಕರೆತರಲಾಗುತ್ತಿದ್ದು, ಬೆಂಗಳುರಿನ ಕುಮಾರಸ್ವಾಮಿ ಲೇಔಟ್ ಠಾಣೆಯಲ್ಲಿ ಕಾನೂನು ಪ್ರಕ್ರಿಯೆ ನಡೆಯಲಿದೆ.
ಇದನ್ನೂ ಓದಿ : ಉಡುಪಿಯಿಂದ ಅಪ್ರಾಪ್ತ ಬಾಲಕನ ಅಪಹರಣ.. ಕೇರಳ ಗಡಿಯಲ್ಲಿ ಜೀವ ಬೆದರಿಕೆ, ಹಲ್ಲೆ : ಇಬ್ಬರು ಕಿಡಿಗೇಡಿಗಳ ಬಂಧನ!



















