ವಿಜಯನಗರ : ಜಿಲ್ಲೆಯ ಹೊಸಪೇಟೆ ಪಟ್ಟಣದ ಆಗಸರ ಓಣಿಯಲ್ಲಿ ಶುಕ್ರವಾರ ಕೌಟುಂಬಿಕ ಕಲಹದ ಹಿನ್ನಲೆಯಲ್ಲಿ ಪತ್ನಿಯನ್ನು ಪತಿಯೇ ಹತ್ಯೆ ಮಾಡಿದ ಘಟನೆ ನಡೆದಿದೆ.
ಪ್ರಭಾವತಿ (50) ಕೊಲೆಯಾದ ಮಹಿಳೆಯಾಗಿದ್ದು, ಪತಿ ರಾಮಮೂರ್ತಿ (55) ಕೊಲೆ ಆರೋಪಿ ಎಂದು ಗುರುತಿಸಲಾಗಿದೆ. ಕೌಟುಂಬಿಕ ವಿಚಾರವಾಗಿ ಇಬ್ಬರ ನಡುವೆ ಆಗಾಗ್ಗೆ ಕಲಹ ನಡೆಯುತ್ತಿತ್ತು ಎನ್ನಲಾಗಿದ್ದು, ಇದೇ ವಿಚಾರ ಇಂದು ತೀವ್ರ ಸ್ವರೂಪ ಪಡೆದು, ರಾಮಮೂರ್ತಿ ಪತ್ನಿ ಪ್ರಭಾವತಿಯನ್ನು ಹತ್ಯೆ ಮಾಡಿದ್ದಾನೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಇನ್ನು ಕೊಲೆ ನಡೆದ ಬಳಿಕ ಆರೋಪಿ ಸ್ಥಳದಿಂದ ಪರಾರಿಯಾಗದೇ ಪೊಲೀಸರ ವಶಕ್ಕೆ ಸಿಕ್ಕಿದ್ದಾನೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ವಿಜಯನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಸ್. ಜಾಹ್ನವಿ ಹಾಗೂ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಮಂಜುನಾಥ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಳಿಕ ಆರೋಪಿಯನ್ನು ವಶಕ್ಕೆ ಪಡೆದ ಹೊಸಪೇಟೆ ಪಟ್ಟಣ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಕೊಲೆಗೆ ನಿಖರ ಕಾರಣಗಳ ಕುರಿತು ತನಿಖೆ ಮುಂದುವರಿಸಿದ್ದಾರೆ.
ಇದನ್ನೂ ಓದಿ : ರಾತ್ರಿ ವ್ಯಕ್ತಿಯೊಂದಿಗೆ ಹೋಟೆಲ್ ಪ್ರವೇಶಿಸಿದ್ದ ಯುವತಿ ಬೆಳಗ್ಗೆ ಶವವಾಗಿ ಪತ್ತೆ!


















