ಕುಮಟಾ: ಬೆಳ್ಳಂಬೆಳಗ್ಗೆ ಕುಮಟಾ ತಾಲೂಕು ಸಾರ್ವಜನಿಕ ಆಸ್ಪತ್ರೆಗೆ ಸಚಿವ ಯು.ಟಿ. ಖಾದರ್ ಭೇಟಿ ನೀಡಿ, ಆಸ್ಪತ್ರೆಯಲ್ಲಿನ ಆರೋಗ್ಯ ಸೇವೆಗಳು, ಮೂಲಸೌಕರ್ಯ, ಸಿಬ್ಬಂದಿ ಲಭ್ಯತೆ ಹಾಗೂ ರೋಗಿಗಳಿಗೆ ಒದಗಿಸಲಾಗುತ್ತಿರುವ ಸೌಲಭ್ಯಗಳ ಕುರಿತು ಸಮಗ್ರ ಪರಿಶೀಲನೆ ನಡೆಸಿದರು.
ಆಸ್ಪತ್ರೆಯ ವಿವಿಧ ವಿಭಾಗಗಳಿಗೆ ಭೇಟಿ ನೀಡಿದ ಸಚಿವರು, ಅಧಿಕಾರಿಗಳಿಂದ ಪ್ರಗತಿ ವರದಿ ಪಡೆದು, ಸಾರ್ವಜನಿಕರಿಗೆ ಗುಣಮಟ್ಟದ ಆರೋಗ್ಯ ಸೇವೆ ಒದಗಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದರು.
ಈ ಸಂದರ್ಭದಲ್ಲಿ ಕುಮಟಾ ಶಾಸಕ ದಿನಕರ್ ಶೆಟ್ಟಿ, ಭಟ್ಕಳ ಶಾಸಕ ಮಂಕಲ್ ವೈದ್ಯ ಹಾಗೂ ಮಾಜಿ ಕುಮಟಾ ಶಾಸಕ ಶಾರದಾ ಮೋಹನ್ ಶೆಟ್ಟಿ ಉಪಸ್ಥಿತರಿದ್ದರು.
ಇದನ್ನೂ ಓದಿ : ರಾಮನ ಹೆಸರಿನಲ್ಲಿ ದರೋಡೆ ನಡೆಯುತ್ತಿದೆ, ಇದನ್ನೆಲ್ಲಾ ನೋಡುತ್ತಾ ನಮ್ಮ ಪ್ರಧಾನಿ ಕಣ್ಮಚ್ಚಿ ಕೂತಿದ್ದಾರೆ : ಆರ್.ಬಿ. ತಿಮ್ಮಾಪುರ


















