ಬೆಂಗಳೂರು: ಬೆಂಗಳೂರಿನಲ್ಲೇ ಉದ್ಯೋಗ ಹುಡುಕುತ್ತಿರುವವರಿಗೆ ಶುಭ ಸಮಾಚಾರ ದೊರೆತಿದೆ. ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ಭಾರತೀಯ ಕಾಫಿ ಮಂಡಳಿಯಲ್ಲಿ (Coffee Board Recruitment 2026) ಖಾಲಿ ಇರುವ ಒಂದು ಹುದ್ದೆಯ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಒಂದು ಸಸ್ಟೇನೆಬಿಲಿಟಿ ಸರ್ಟಿಫಿಕೇಶನ್ ಕನ್ಸಲ್ಟಂಟ್ ಹುದ್ದೆಯನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆಫ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ನೇಮಕಾತಿಗೆ ಸಂಬಂಧಿಸಿದ ಹೆಚ್ಚಿನ ವಿವರ ಈ ಕೆಳಗಿನಂತಿದೆ.
ಹುದ್ದೆಗಳ ಕುರಿತು ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ಭಾರತೀಯ ಕಾಫಿ ಮಂಡಳಿ
ಒಟ್ಟು ಹುದ್ದೆಗಳು: 1
ಅರ್ಜಿ ಸಲ್ಲಿಕೆ ಮಾದರಿ: ಇ-ಮೇಲ್
ಉದ್ಯೋಗ ಸ್ಥಳ: ಬೆಂಗಳೂರು, ಕರ್ನಾಟಕ
ಹುದ್ದೆಗಳ ಹೆಸರು: ಸಸ್ಟೇನೆಬಿಲಿಟಿ ಸರ್ಟಿಫಿಕೇಶನ್ ಕನ್ಸಲ್ಟಂಟ್
ಅರ್ಜಿ ಸಲ್ಲಿಸಲು ಬಯಸುವವರು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಸ್ನಾತಕೋತ್ತರ ಪದವಿ ಮುಗಿಸಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 75 ಸಾವಿರ ರೂಪಾಯಿ ಸಂಬಳ ನೀಡಲಾಗುತ್ತದೆ. ಸಲ್ಲಿಕೆಯಾದ ಅರ್ಜಿಗಳನ್ನು ಮೊದಲು ಪರಿಶೀಲನೆ ಮಾಡಲಾಗುತ್ತದೆ. ಇದಾದ ಬಳಿಕ ಸಂದರ್ಶನಕ್ಕೆ ಆಹ್ವಾನಿಸಿ ನೇಮಕಾತಿ ಮಾಡಿಕೊಳ್ಳಿಲಾಗುತ್ತದೆ.
ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಮೊದಲಿಗೆ coffeeboard.gov.in ವೆಬ್ ಸೈಟ್ ಗೆ ಭೇಟಿ ನೀಡಬೇಕು. ಅಧಿಸೂಚನೆಯನ್ನು ಓದಿಕೊಂಡು ಅಗತ್ಯ ದಾಖಲೆಗಳನ್ನು ರೆಡಿ ಮಾಡಿಟ್ಟುಕೊಳ್ಳಬೇಕು. ಅರ್ಜಿ ನಮೂನೆಯ ಪ್ರಿಂಟ್ ಔಟ್ ತೆಗೆದುಕೊಂಡು ಭರ್ತಿ ಮಾಡಬೇಕು. ಅರ್ಜಿ ಹಾಗೂ ದಾಖಲೆಗಳ ಸಾಫ್ಟ್ ಕಾಪಿಗಳನ್ನು drpbabu.cbd@gov.in ವಿಳಾಸಕ್ಕೆ ಮೇಲ್ ಮಾಡಬಹುದು.


















