ಬೆಂಗಳೂರು: ಬೆಂಗಳೂರಿನಲ್ಲಿಯೇ ಕೈತುಂಬ ಸಂಬಳದ ಉದ್ಯೋಗ ಪಡೆಯಬೇಕು ಎಂದು ಬಯಸುತ್ತಿರುವವರಿಗೆ ಶುಭ ಸಮಾಚಾರ ದೊರೆತಿದೆ. ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ಇಂಡಿಯನ್ ಇನ್ ಸ್ಟಿಟ್ಯೂಟ್ ಆಫ್ ಸೈನ್ಸ್ (IISc Recruitment 2026) ಸಂಸ್ಥೆಯಲ್ಲಿ ಖಾಲಿ ಇರುವ ಒಂದು ಹುದ್ದೆಯ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಒಂದು ಸೈಕೆಯಾರ್ಟಿಸ್ಟ್ ಸೋಷಿಯಲ್ ವರ್ಕರ್ ಹುದ್ದೆಯನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ಇಂಡಿಯನ್ ಇನ್ ಸ್ಟಿಟ್ಯೂಟ್ ಆಫ್ ಸೈನ್ಸ್
ಹುದ್ದೆಗಳ ಹೆಸರು: ಸೈಕೆಯಾರ್ಟಿಸ್ಟ್ ಸೋಷಿಯಲ್ ವರ್ಕರ್
ಒಟ್ಟು ಹುದ್ದೆಗಳು: 01
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ಜುಲೈ 20
ನೇಮಕಾತಿ ಹೊಂದಿದವರಿಗೆ ಮಾಸಿಕ 48 ಸಾವಿರ ರೂಪಾಯಿ ಸಂಬಳ ನೀಡಲಾಗುತ್ತದೆ. ಅರ್ಜಿ ಸಲ್ಲಿಸಲು ಬಯಸುವವರು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಎಂ.ಫಿಲ್ ಮುಗಿಸಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಅರ್ಜಿ ಸಲ್ಲಿಸಲು ಯಾವುದೇ ಶುಲ್ಕ ಇರುವುದಿಲ್ಲ. ಸಲ್ಲಿಕೆಯಾದ ಅರ್ಜಿಗಳನ್ನು ಮೊದಲು ಪರಿಶೀಲನೆ ಮಾಡಲಾಗುತ್ತದೆ. ಇದಾದ ಬಳಿಕ ಸಂದರ್ಶನಕ್ಕೆ ಆಹ್ವಾನಿಸಿ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ?
ಮೊದಲಿಗೆ ಅಧಿಕೃತ ವೆಬ್ ಸೈಟ್ ಆಗಿರುವ iisc.ac.in ಗೆ ಭೇಟಿ ನೀಡಬೇಕು
ನೇಮಕಾತಿಗೆ ಸಂಬಂಧಿಸಿದ ಅಧಿಸೂಚನೆ ಓದಿಕೊಳ್ಳಬೇಕು
ಅರ್ಜಿಯ ಪ್ರಿಂಟೌಟ್ ತೆಗೆದುಕೊಳ್ಳಬೇಕು
ಅರ್ಜಿಯನ್ನು ಭರ್ತಿ ಮಾಡಿ, ಅಗತ್ಯ ದಾಖಲೆ ಸಿದ್ಧಪಡಿಸಿಕೊಳ್ಳಬೇಕು
ಅರ್ಜಿ ಹಾಗೂ ದಾಖಲೆಗಳನ್ನು ಸಲ್ಲಿಕೆ ಮಾಡಬೇಕು
ಫ್ಯೂಚರ್ ರೆಫರೆನ್ಸಿಗಾಗಿ ಅರ್ಜಿ ನಮೂನೆಯ ಪ್ರಿಂಟೌಟ್ ತೆಗೆದುಕೊಳ್ಳಬೇಕು



















