ಬೆಂಗಳೂರು : ನಗರದಲ್ಲಿ ರೋಡ್ ರೇಜ್ ಪ್ರಕರಣಗಳು ಹೆಚ್ಚಾಗುತ್ತಿರುವ ನಡುವೆಯೇ, ಬಿಟಿಎಂ ಲೇಔಟ್‌ನಿಂದ ತಾವರೆಕೆರೆ ಕಡೆಗೆ ಸಾಗುವ ರಸ್ತೆಯಲ್ಲಿ ಕ್ಯಾಬ್ ಚಾಲಕನೊಬ್ಬ ರಾಡ್ ಹಿಡಿದು ಮತ್ತೊಬ್ಬ ಕ್ಯಾಬ್ ಚಾಲಕನ ಮೇಲೆ ಹಲ್ಲೆ ಮಾಡಿರುವ ಘಟನೆ ನಡೆದಿದೆ.
ರಸ್ತೆಯಲ್ಲಿ ವಾಹನಕ್ಕೆ ದಾರಿ ಬಿಡುವಂತೆ ಹಾರ್ನ್ ಮಾಡಿದ ವಿಚಾರಕ್ಕೆ ಆಕ್ರೋಶಗೊಂಡ ಕ್ಯಾಬ್ ಚಾಲಕ, ಏಕಾಏಕಿ ಕಾರಿನಿಂದ ಇಳಿದು ಕೈಯಲ್ಲಿ ರಾಡ್ ಹಿಡಿದು ಮತ್ತೊಂದು ಕಾರಿನ ಚಾಲಕನ ಮೇಲೆ ಹಲ್ಲೆ ನಡೆಸಿದ್ದಾನೆ. ಕೆಲಕಾಲ ರಸ್ತೆಯಲ್ಲೇ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದು, ವಾಹನ ಸಂಚಾರಕ್ಕೂ ಅಡಚಣೆ ಉಂಟಾಗಿದೆ.
ಬಳಿಕ ಸ್ಥಳದಲ್ಲಿದ್ದ ಸಾರ್ವಜನಿಕರು ಮತ್ತು ಸ್ಥಳೀಯರು ತಕ್ಷಣ ಮಧ್ಯಪ್ರವೇಶಿಸಿ ಆಕ್ರೋಶಗೊಂಡ ಚಾಲಕನನ್ನು ಸಮಾಧಾನಪಡಿಸಿದ್ದಾರೆ. ಇದರಿಂದ ಯಾವುದೇ ದೊಡ್ಡ ಅನಾಹುತ ಸಂಭವಿಸದೇ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದೆ.
ಈ ಘಟನೆ ನಗರದಲ್ಲಿ ಹೆಚ್ಚುತ್ತಿರುವ ರೋಡ್ ರೇಜ್ ಪ್ರಕರಣಗಳ ಬಗ್ಗೆ ಮತ್ತೆ ಆತಂಕ ಮೂಡಿಸಿದ್ದು, ಸಾರ್ವಜನಿಕ ಸ್ಥಳಗಳಲ್ಲಿ ಹಿಂಸಾತ್ಮಕ ವರ್ತನೆ ತಡೆಯಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ.
ಇದನ್ನೂ ಓದಿ : ಡುರೊಂಟೊ ಎಕ್ಸ್ಪ್ರೆಸ್ ರೈಲಿಗೆ ಬಾಂಬ್ ಬೆದರಿಕೆ : ಪ್ರಯಾಣಿಕರನ್ನ ಕೆಳಗಿಳಿಸಿ ತಪಾಸಣೆ.. ಓರ್ವ ವಶಕ್ಕೆ!


















