ಬೆಂಗಳೂರು : ನೀವೇನಾದರೂ ಮೈಸೂರು ಜಿಲ್ಲೆಯವರಾ? ನಿಮ್ಮ ಜಿಲ್ಲೆಯಲ್ಲಿಯೇ ಉದ್ಯೋಗ ಪಡೆಯಬೇಕು ಎಂದು ಬಯಸುತ್ತಿದ್ದೀರಾ? ಹಾಗಾದರೆ, ನಿಮಗೊಂದು ಶುಭ ಸಮಾಚಾರ ಇಲ್ಲಿದೆ. ಕೇಂದ್ರ ಸರ್ಕಾರಿ ಸ್ವಾಮ್ಯದ, ಮೈಸೂರಿನಲ್ಲಿಯೇ ಕೇಂದ್ರ ಕಚೇರಿ ಹೊಂದಿರುವ ಸೆಂಟ್ರಲ್ ಫುಡ್ ಟೆಕ್ನಾಲಜಿಕಲ್ ರಿಸರ್ಚ್ ಇನ್ ಸ್ಟಿಟ್ಯೂಟ್ (CFTRI Recruitment 2026) ಸಂಸ್ಥೆಯಲ್ಲಿ ಖಾಲಿ ಇರುವ 1 ಹುದ್ದೆಯ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ನೇಮಕಾತಿ ಸಂಸ್ಥೆ: ಸೆಂಟ್ರಲ್ ಫುಡ್ ಟೆಕ್ನಾಲಜಿಕಲ್ ರಿಸರ್ಚ್ ಇನ್ ಸ್ಟಿಟ್ಯೂಟ್ (CFTRI)
ಒಟ್ಟು ಹುದ್ದೆಗಳು: 1
ಹುದ್ದೆಯ ಹೆಸರು: ಪ್ರಾಜೆಕ್ಟ್ ಅಸೋಸಿಯೇಟ್-I
ಉದ್ಯೋಗ ಸ್ಥಳ: ಮೈಸೂರು
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಜುಲೈ 15
ನೇಮಕಾತಿ ಹೊಂದಿದವರಿಗೆ ಮಾಸಿಕ 37 ಸಾವಿರ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ. ಅರ್ಜಿ ಸಲ್ಲಿಸಲು ಬಯಸುವವರು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಿಂದ ಮೆಕ್ಯಾನಿಕಲ್ ಎಂಜಿನಿಯರಿಂಗ್ ನಲ್ಲಿ ಬಿಇ ಅಥವಾ ಬಿ.ಟೆಕ್ ಮುಗಿಸಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಅರ್ಜಿ ಸಲ್ಲಿಸುವವರಿಗೆ ಗರಿಷ್ಠ 50 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. ಅರ್ಜಿ ಸಲ್ಲಿಸಲು ಯಾವುದೇ ಶುಲ್ಕ ಇರುವುದಿಲ್ಲ. ಸಲ್ಲಿಕೆಯಾದ ಅರ್ಜಿಗಳನ್ನು ಪರಿಶೀಲನೆ ನಡೆಸಿ, ಮೆರಿಟ್ ಲಿಸ್ಟ್ ಬಿಡುಗಡೆ ಮಾಡಲಾಗುತ್ತದೆ. ಇದಾದ ಬಳಿಕ ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಆಹ್ವಾನಿಸಿ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ?
ಮೊದಲಿಗೆ cftri.res.in ವೆಬ್ ಸೈಟ್ ಗೆ ಭೇಟಿ ನೀಡಬೇಕು
ನಿಮಗೆ ಬೇಕಾದ ಹುದ್ದೆ ಆಯ್ಕೆ ಮಾಡಿಕೊಳ್ಳಬೇಕು
ಅರ್ಜಿ ಸಲ್ಲಿಕೆ ಕುರಿತ ಅಧಿಸೂಚನೆ ಓದಿಕೊಳ್ಳಬೇಕು
ಅರ್ಜಿ ನಮೂನೆಯನ್ನು ಭರ್ತಿ ಮಾಡಬೇಕು
ಅಗತ್ಯ ದಾಖಲೆಗಳನ್ನು ಅಪ್ ಲೋಡ್ ಮಾಡಬೇಕು
ಫ್ಯೂಚರ್ ರೆಫರೆನ್ಸಿಗಾಗಿ ಅರ್ಜಿಯನ್ನು ಡೌನ್ ಲೋಡ್ ಮಾಡಿಟ್ಟುಕೊಂಡಿರಬೇಕು
ಇದನ್ನೂ ಓದಿ : ವಿಶ್ವಕಪ್‌ನಲ್ಲಿ ಹೊಸ ಇತಿಹಾಸ ಸೃಷ್ಟಿಸಿದ ಇಂಗ್ಲೆಂಡ್ ನಾಯಕಿ ನ್ಯಾಟ್ ಸ್ಕೈವರ್ ಬ್ರಂಟ್



















