ಬೆಂಗಳೂರು : ರಾಜಾಜಿನಗರ ವಿಧಾನಸಭಾ ಕ್ಷೇತ್ರದ ಶಾಸಕರ ಕಚೇರಿ ಮುಂಭಾಗ ನಡೆದ ‘ಜನರೊಂದಿಗೆ ಜನಸೇವಕ – ಜನಸ್ಪಂದನಾ’ ಕಾರ್ಯಕ್ರಮದ ವೇಳೆ ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರ ನಡುವೆ ಭಾರೀ ಹೈಡ್ರಾಮವೇ ನಡೆದಿದೆ.

ಶಾಸಕ ಎಸ್. ಸುರೇಶ್ ಕುಮಾರ್ ಅವರ ಉಪಸ್ಥಿತಿಯಲ್ಲಿ ಕಾರ್ಯಕ್ರಮ ನಡೆಯುತ್ತಿದ್ದ ವೇಳೆ ಎನ್‌ಎಸ್‌ಯುಐ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಇದಕ್ಕೆ ಪ್ರತಿಯಾಗಿ ಬಿಜೆಪಿ ಕಾರ್ಯಕರ್ತರೂ ಕಾಂಗ್ರೆಸ್ ವಿರುದ್ಧ ಪ್ರತಿಭಟನೆಗೆ ಮುಂದಾಗಿದ್ದಾರೆ. ಈ ವೇಳೆ ಉಭಯ ಪಕ್ಷಗಳ ಕಾರ್ಯಕರ್ತರ ನಡುವೆ ವಾಗ್ವಾದ ನಡೆದಿದ್ದು, ಒಬ್ಬರಿಗೊಬ್ಬರು ಪರಸ್ಪರ ಕೈ-ಕೈ ಮಿಲಾಯಿಸಿದ್ದಾರೆ.

ಉದ್ವಿಗ್ನ ವಾತಾವರಣ ನಿರ್ಮಾಣವಾಗುತ್ತಿದ್ದಂತೆ ಪೊಲೀಸರು ಮಧ್ಯಪ್ರವೇಶಿಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ. ಬಳಿಕ ಪ್ರತಿಭಟನೆ ನಡೆಸುತ್ತಿದ್ದ ಕೆಲ ಎನ್‌ಎಸ್‌ಯುಐ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ. ಘಟನಾ ಸಂಬಂಧ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
ಇದನ್ನೂ ಓದಿ : ಸ್ವಪಕ್ಷದಲ್ಲೇ ಒತ್ತುವರಿ ತೆರವಿಗೆ ವಿರೋಧ? ಒತ್ತಡದ ನಡುವೆಯೂ ಕಾರ್ಯಾಚರಣೆ ಮುಂದುವರಿಕೆ!



















