ಬೆಂಗಳೂರು : ಕರ್ನಾಟಕದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು (BCWD) 2026-27ನೇ ಶೈಕ್ಷಣಿಕ ವರ್ಷದಲ್ಲಿ ಬಿಸಿಎಂ ಹಾಸ್ಟೆಲ್ ಗಳ ಪ್ರವೇಶಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಿದೆ. ಮೆಟ್ರಿಕ್ ನಂತರದ ವಿದ್ಯಾರ್ಥಿಗಳು ಆನ್ ಲೈನ್ ಮೂಲಕವೇ ಅರ್ಜಿ ಸಲ್ಲಿಸುವ ಮೂಲಕ ಉಚಿತ ವಸತಿ ಹಾಗೂ ಆಹಾರದ ಸೌಲಭ್ಯವನ್ನು ಪಡೆಯಬಹುದಾಗಿದೆ. ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಲು ಜುಲೈ 20ರವರೆಗೆ ಅವಕಾಶ ನೀಡಲಾಗಿದೆ.
ಪ್ರಥಮ ಹಾಗೂ ದ್ವಿತೀಯ ಪಿಯುಸಿ (PUC), ಡಿಪ್ಲೊಮಾ, ಐ.ಟಿ.ಐ (ITI) ಮತ್ತು ಪದವಿ (BA, BSc, BCom, BBA, BCA) ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ವಿದ್ಯಾರ್ಥಿಗಳು ಹಾಗೂ ವಿದ್ಯಾರ್ಥಿನಿಯರು ಇದರ ಸೌಲಭ್ಯ ಪಡೆಯಬಹುದು. ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಇಲಾಖೆಯ ಹಾಸ್ಟೆಲ್ಗಳಿಗೆ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪರಿಶಿಷ್ಟ ಜಾತಿ (SC) ಮತ್ತು ಪರಿಶಿಷ್ಟ ಪಂಗಡದ (ST) ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರು.
ಅರ್ಜಿ ಸಲ್ಲಿಸುವ ವಿಧಾನ
ಅಧಿಕೃತ ವೆಬ್ ಸೈಟ್ https://shp.karnataka.gov.in/bcwd ಗೆ ಭೇಟಿ ನೀಡಿ.
“Post Matric – Apply” ಆಪ್ಶನ್ ಮೇಲೆ ಕ್ಲಿಕ್ ಮಾಡಿ.
ನಿಮ್ಮ ಬಳಿ ಇರುವ SSP ID ಅಥವಾ ಲಾಗಿನ್ ವಿವರಗಳನ್ನು ಬಳಸಿ ಲಾಗಿನ್ ಆಗಿ.
ಅರ್ಜಿಯಲ್ಲಿ ಕೇಳಲಾದ ವಿವರಗಳನ್ನು (ಎಸ್ ಎಸ್ ಎಲ್ ಸಿ ಅಂಕಪಟ್ಟಿ, ಜಾತಿ ಮತ್ತು ಆದಾಯ ಪ್ರಮಾಣಪತ್ರದ ಆರ್ ಡಿ (RD) ಸಂಖ್ಯೆ, ಶೈಕ್ಷಣಿಕ ವಿವರಗಳು) ಭರ್ತಿ ಮಾಡಿ. ಹಾಸ್ಟೆಲ್ ಆದ್ಯತೆಗಳನ್ನು (Priority) ಆಯ್ಕೆ ಮಾಡಿ. ಅಂತಿಮವಾಗಿ ಎಲ್ಲ ವಿವರಗಳನ್ನು ಪರಿಶೀಲಿಸಿ “Final Submit” ಮೇಲೆ ಕ್ಲಿಕ್ ಮಾಡಿ.
ಸಹಾಯವಾಣಿ
ಅರ್ಜಿ ಸಲ್ಲಿಸುವಾಗ ತಾಂತ್ರಿಕ ಸಮಸ್ಯೆಗಳಿದ್ದರೆ ವಿದ್ಯಾರ್ಥಿಗಳು 8050770004 ಸಂಖ್ಯೆಗೆ ಕರೆ ಮಾಡಬಹುದು ಅಥವಾ bcwdhelpline@gmail.com ಗೆ ಮೇಲ್ ಮಾಡಬಹುದು.
ಇದನ್ನೂ ಓದಿ : ಕೇಂದ್ರ ಸರ್ಕಾರದ IHMCL ಸಂಸ್ಥೆಯಲ್ಲಿ 30 ಹುದ್ದೆಗಳ ನೇಮಕಾತಿ : 1.6 ಲಕ್ಷ ರೂ. ಸಂಬಳ



















