ಬೆಂಗಳೂರು : ರಾಜ್ಯದ ಲಕ್ಷಾಂತರ ಉದ್ಯೋಗಾಕಾಂಕ್ಷಿಗಳಿಗೆ ಕರ್ನಾಟಕ ಪೊಲೀಸ್ ಇಲಾಖೆಯು ಸಿಹಿ ಸುದ್ದಿ ನೀಡಿದೆ. ರಾಜ್ಯ ಪೊಲೀಸ್ ಇಲಾಖೆಯು 3,991 ಸಿವಿಲ್ ಕಾನ್ಸ್ಟೇಬಲ್ ಹುದ್ದೆಗಳನ್ನು (KSP Recruitment 2026) ಭರ್ತಿ ಮಾಡಲು ಅಧಿಸೂಚನೆ ಹೊರಡಿಸಿದೆ.
ಅರ್ಹ ಹಾಗೂ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಅದರಲ್ಲೂ, ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕವನ್ನು ಜುಲೈ 3ರ ಬದಲಾಗಿ ಜುಲೈ 8ರವರೆಗೆ ವಿಸ್ತರಣೆ ಮಾಡಲಾಗಿರುವುದು ಅಭ್ಯರ್ಥಿಗಳಿಗೆ ಅನುಕೂಲವಾಗಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ
ಹುದ್ದೆಗಳ ಹೆಸರು: ಕಾನ್ ಸ್ಟೆಬಲ್
ಒಟ್ಟು ಹುದ್ದೆಗಳು: 3,991
ಅರ್ಜಿ ಸಲ್ಲಿಕೆ ವಿಧಾನ: ಆನ್ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಜುಲೈ 8
ಕಲ್ಯಾಣ ಕರ್ನಾಟಕ ಭಾಗದಲ್ಲಿ 596 ಸಿವಿಲ್ ಕಾನ್ ಸ್ಟೆಬಲ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಇನ್ನು, ಕಲ್ಯಾಣ ಕರ್ನಾಟಕ ಹೊರತಾದ ಭಾಗಗಳಲ್ಲಿ 3,395 ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸಲು ಬಯಸುವವರು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಯಲ್ಲಿ ಎಸ್ಸೆಸ್ಸೆಲ್ಸಿ, ಪಿಯುಸಿ ಮುಗಿಸಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಒಬಿಸಿ, 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ 750 ರೂಪಾಯಿ ಅರ್ಜಿ ಶುಲ್ಕವಿದೆ. ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ 500 ರೂಪಾಯಿ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ. ಲಿಖಿತ ಪರೀಕ್ಷೆ, ಎಂಡುರೆನ್ಸ್ ಟೆಸ್ಟ್, ದೈಹಿಕ ಸಾಮರ್ಥ್ಯ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷ ಹಾಗೂ ಒಬಿಸಿಯವರಿಗೆ 2 ವರ್ಷಗಳ ವಯೋಮಿತಿ ಸಡಿಲಿಕೆ ಇರಲಿದೆ. ಕನಿಷ್ಠ 18ರಿಂದ 33 ವರ್ಷದೊಳಗಿನವರು ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ. ಅರ್ಹ ಅಭ್ಯರ್ಥಿಗಳು ksp-recruitment.in ವೆಬ್ ಸೈಟ್ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ.
ಇದನ್ನೂ ಓದಿ : ‘ತೂಗು ಸೇತುವೆಗಳ ಸರದಾರ’ ಪದ್ಮಶ್ರೀ ಪುರಸ್ಕೃತ ಡಾ. ಗಿರೀಶ್ ಭಾರದ್ವಾಜ್ ವಿಧಿವಶ



















