ಬೆಂಗಳೂರು : ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ, ಕರ್ನಾಟಕದ ಬೆಂಗಳೂರಿನಲ್ಲೇ ಕಚೇರಿ ಹೊಂದಿರುವ ರಾಷ್ಟ್ರೀಯ ಜೈವಿಕ ವಿಜ್ಞಾನಗಳ ಕೇಂದ್ರದಲ್ಲಿ (NCBS Recruitment 2026) ಸಂಸ್ಥೆಯಲ್ಲಿ ಖಾಲಿ ಇರುವ ಒಂದು ಹುದ್ದೆಯ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಒಂದು ಸೈಂಟಿಫಿಕ್ ಆಫೀಸರ್ ಹುದ್ದೆಯನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ನೇಮಕಾತಿ ಸಂಸ್ಥೆ: ನ್ಯಾಷನಲ್ ಸೆಂಟರ್ ಫಾರ್ ಬಯೋಲಾಜಿಕಲ್ ಸೈನ್ಸಸ್ (NCBS)
ಒಟ್ಟು ಹುದ್ದೆಗಳು: 01
ಉದ್ಯೋಗ ಸ್ಥಳ: ಬೆಂಗಳೂರು, ಕರ್ನಾಟಕ
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಹುದ್ದೆಗಳ ಹೆಸರು: ಸೈಂಟಿಫಿಕ್ ಆಫೀಸರ್
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಜುಲೈ 20
ಅರ್ಜಿ ಸಲ್ಲಿಸಲು ಬಯಸುವವರು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಬಿ.ವಿ.ಎಸ್ಸಿ ಕೋ್ಸ್ ಮುಗಿಸಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಗರಿಷ್ಠ 31 ವರ್ಷದೊಳಗಿನವರು ಅರ್ಜಿ ಸಲ್ಲಿಸಲು ಅರ್ಹರು. ಎಸ್ಸಿ, ಎಸ್ಟಿ, ವಿಶೇಷ ಚೇತನ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವಿಲ್ಲ. ಉಳಿದವರಿಗೆ 1 ಸಾವಿರ ರೂಪಾಯಿ ಅರ್ಜಿ ಶುಲ್ಕವಿದೆ. ಸಲ್ಲಿಕೆಯಾದ ಅರ್ಜಿಗಳನ್ನು ಮೊದಲು ಪರಿಶೀಲನೆ ಮಾಡಲಾಗುತ್ತದೆ. ಇದಾದ ಬಳಿಕ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ?
ಮೊದಲಿಗೆ ಅಧಿಕೃತ ವೆಬ್ ಸೈಟ್ ಆಗಿರುವ ncbs.res.in ಗೆ ಭೇಟಿ ನೀಡಬೇಕು
ನಿಮಗೆ ಬೇಕಾದ ಹುದ್ದೆಗಳ ಅಧಿಸೂಚನೆಯನ್ನು ಓದಿ ಅರ್ಹತೆ ಪರಿಶೀಲಿಸಬೇಕು.
ಆನ್ ಲೈನ್ ಅರ್ಜಿ ನಮೂನೆಯ ಲಿಂಕ್ ತೆರೆದು, ಭರ್ತಿ ಮಾಡಬೇಕು
ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಬೇಕು
ಫ್ಯೂಚರ್ ರೆಫರೆನ್ಸಿಗಾಗಿ ಅರ್ಜಿ ನಮೂನೆಯ ಪ್ರಿಂಟೌಟ್ ತೆಗೆದಿಟ್ಟುಕೊಳ್ಳಬೇಕು
ಇದನ್ನೂ ಓದಿ : ಪೊಲೀಸ್ ಇಲಾಖೆಯಲ್ಲಿ 3,991 ಹುದ್ದೆಗಳ ನೇಮಕಾತಿ : ಅರ್ಜಿ ಸಲ್ಲಿಕೆಗೆ ನಾಳೆಯೇ ಕೊನೆಯ ದಿನ!



















