ಬೆಂಗಳೂರು : ಕರ್ನಾಟಕ ಸರ್ಕಾರದ ಹುದ್ದೆಗಳನ್ನು ಪಡೆಯಲು ಪ್ರಯತ್ನ ಮಾಡುತ್ತಿರುವವರಿಗೆ ಒಳ್ಳೆಯ ಅವಕಾಶ ದೊರೆತಿದೆ. ಕರ್ನಾಟಕ ಅರಣ್ಯ, ವನ್ಯಜೀವಿ ಮತ್ತು ಹವಾಮಾನ ಬದಲಾವಣೆ ಪ್ರತಿಷ್ಠಾನದಲ್ಲಿ (KFWCCF Recruitment 2026) ಖಾಲಿ ಇರುವ ಒಂದು ಹುದ್ದೆಯ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಒಂದು ಸಾರ್ವಜನಿಕ ಸಂಪರ್ಕಾಧಿಕಾರಿ (PRO) ಹುದ್ದೆಗೆ ನೇಮಕಾತಿ ನಡೆಯುತ್ತಿದೆ. ಅರ್ಹ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ನೇಮಕಾತಿ ಸಂಸ್ಥೆ: ಕರ್ನಾಟಕ ಅರಣ್ಯ, ವನ್ಯಜೀವಿ ಮತ್ತು ಹವಾಮಾನ ಬದಲಾವಣೆ ಪ್ರತಿಷ್ಠಾನ (KFWCCF)
ಒಟ್ಟು ಹುದ್ದೆಗಳು: 1
ಹುದ್ದೆಯ ಹೆಸರು: ಸಾರ್ವಜನಿಕ ಸಂಪರ್ಕಾಧಿಕಾರಿ
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಜುಲೈ 18
ಅಭ್ಯರ್ಥಿಗಳನ್ನು ಎರಡು ವರ್ಷಗಳ ಅವಧಿಗೆ ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಇದಾದ ಬಳಿಕ ಉದ್ಯೋಗಿಯ ದಕ್ಷತೆ ಹಾಗೂ ಅವಶ್ಯಕತೆ ಆಧಾರದ ಮೇಲೆ ಅವಧಿಯನ್ನು ವಿಸ್ತರಣೆ ಮಾಡುವ ಸಾಧ್ಯತೆ ಇರುತ್ತದೆ. ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಕಚೇರಿಯಲ್ಲಿ ಕೆಲಸ ಮಾಡಲು ಇಚ್ಛಿಸುವವರು ಅರ್ಜಿಗಳನ್ನು ಸಲ್ಲಿಸಬಹುದು. ನೇಮಕಾತಿ ಹೊಂದಿದವರಿಗೆ ಮಾಸಿಕ 1.5 ಲಕ್ಷ ರೂ. ಸಂಬಳ ನೀಡಲಾಗುತ್ತದೆ. ಅರ್ಜಿ ಸಲ್ಲಿಸುವವರು ಪದವಿ ಪೂರ್ಣಗೊಳಿಸಿರಬೇಕು ಎಂದು ತಿಳಿಸಲಾಗಿದೆ.
ಅರ್ಜಿ ಸಲ್ಲಿಸುವುದು ಹೇಗೆ?
ಮೊದಲಿಗೆ http://www.kfwccf.in/ ವೆಬ್ ಸೈಟ್ ಗೆ ಭೇಟಿ ನೀಡಬೇಕು
ನಿಮಗೆ ಬೇಕಾದ ಹುದ್ದೆ ಆಯ್ಕೆ ಮಾಡಿಕೊಳ್ಳಬೇಕು
ಅರ್ಜಿ ಸಲ್ಲಿಕೆ ಕುರಿತ ಅಧಿಸೂಚನೆ ಓದಿಕೊಳ್ಳಬೇಕು
ಅರ್ಜಿ ನಮೂನೆಯನ್ನು ಭರ್ತಿ ಮಾಡಬೇಕು
ಅಗತ್ಯ ದಾಖಲೆಗಳನ್ನು ಅಪ್ ಲೋಡ್ ಮಾಡಬೇಕು
ಫ್ಯೂಚರ್ ರೆಫರೆನ್ಸಿಗಾಗಿ ಅರ್ಜಿಯನ್ನು ಡೌನ್ ಲೋಡ್ ಮಾಡಿಟ್ಟುಕೊಂಡಿರಬೇಕು
ಇದನ್ನೂ ಓದಿ : ವಿದೇಶಾಂಗ ವ್ಯವಹಾರಗಳ ಸಚಿವಾಲಯದಲ್ಲಿ ನೇಮಕಾತಿ : ತಿಂಗಳಿಗೆ 2.08 ಲಕ್ಷ ರೂ. ಭರ್ಜರಿ ಸಂಬಳ



















