ಬೆಂಗಳೂರು : ನೀವು ಚಿಕ್ಕಮಗಳೂರು ಜಿಲ್ಲೆಯವರಾ? ನಿಮ್ಮ ಜಿಲ್ಲೆಯಲ್ಲಿಯೇ ಉದ್ಯೋಗ ಪಡೆಯಬೇಕು ಎಂದು ಬಯಸುತ್ತಿದ್ದೀರಾ? ಹಾಗಾದರೆ, ನಿಮಗೊಂದು ಗುಡ್ ನ್ಯೂಸ್ ಇಲ್ಲಿದೆ. ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲೂಕಿನಲ್ಲಿರುವ ಯಡಗೆರೆ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿ ಲಿಮಿಟೆಡ್ (YASCCON Recruitment 2026) ಸಂಸ್ಥೆಯಲ್ಲಿ ಖಾಲಿ ಇರುವ 4 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಅಭ್ಯರ್ಥಿಗಳು ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.
ನೇಮಕಾತಿಯ ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ಯಡಗೆರೆ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿ ಲಿಮಿಟೆಡ್ (YASCCON)
ಒಟ್ಟು ಹುದ್ದೆಗಳು: 4
ಹುದ್ದೆಗಳ ಹೆಸರು: ಅಸಿಸ್ಟಂಟ್ ಹಾಗೂ ಸಬ್ ಸ್ಟಾಫ್
ಹುದ್ದೆಗಳ ಸಂಖ್ಯೆ: 4
ಉದ್ಯೋಗ ಸ್ಥಳ: ಕೊಪ್ಪ, ಚಿಕ್ಕಮಗಳೂರು ಜಿಲ್ಲೆ
ಅರ್ಜಿ ಸಲ್ಲಿಸುವ ವಿಧಾನ: ಆಫ್ ಲೈನ್
1 ಚೀಫ್ ಎಕ್ಸಿಕ್ಯೂಟಿವ್, 1 ಅಸಿಸ್ಟಂಟ್ ಹಾಗೂ 2 ಸಬ್ ಸ್ಟಾಫ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅರ್ಜಿ ಸಲ್ಲಿಸಲು ಬಯಸುವವರು ಎಸ್ಸೆಸ್ಸೆಲ್ಸಿ, ಪದವಿ, ಎಂಬಿಎ, ಎಂಎ ಕೋರ್ಸ್ ಮುಗಿಸಿರಬೇಕು ಎಂದು ತಿಳಿಸಲಾಗಿದೆ. ಅರ್ಜಿ ಸಲ್ಲಿಸುವವರಿಗೆ ಗರಿಷ್ಠ 30 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. ಅರ್ಜಿ ಸಲ್ಲಿಸಲು ಯಾವುದೇ ಶುಲ್ಕ ಇರುವುದಿಲ್ಲ.
ಸಲ್ಲಿಕೆಯಾದ ಅರ್ಜಿಗಳನ್ನು ಮೊದಲು ಪರಿಶೀಲನೆ ಮಾಡಲಾಗುತ್ತದೆ. ನಂತರ ಸಂದರ್ಶನಕ್ಕೆ ಆಹ್ವಾನಿಸಿ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅರ್ಜಿ ನಮೂನೆಗಾಗಿ souharda.coop ವೆಬ್ ಸೈಟ್ ಗೆ ಭೇಟಿ ನೀಡಬಹುದಾಗಿದೆ. ಅರ್ಜಿ ನಮೂನೆಯ ಪ್ರಿಂಟೌಟ್ ತೆಗೆದುಕೊಂಡು ಭರ್ತಿ ಮಾಡಬೇಕು. ಅರ್ಜಿ ಹಾಗೂ ಅಗತ್ಯ ದಾಖಲೆಗಳ ಸಾಫ್ಟ್ ಕಾಪಿಗಳನ್ನು ಈ ಕೆಳಗಿನ ವಿಳಾಸಕ್ಕೆ ಜುಲೈ 15ರೊಳಗೆ ಪೋಸ್ಟ್ ಮಾಡಬೇಕು ಎಂದು ತಿಳಿಸಲಾಗಿದೆ.
ಅರ್ಜಿ ಸಲ್ಲಿಸಬೇಕಾದ ವಿಳಾಸ
Yadagere Souharda Co-operative Society Limited, Koppa, YASCCON Commercial Complex, T.M. Road, Koppa, Chikkamagaluru – 577126, Karnataka
ಇದನ್ನೂ ಓದಿ : ಐಫೋನ್ ಪ್ರಿಯರಿಗೆ ಗುಡ್ ನ್ಯೂಸ್ : 1.50 ಲಕ್ಷ ರೂಪಾಯಿಯ 17 ಪ್ರೊ ಮ್ಯಾಕ್ಸ್ ಬೆಲೆ ಈಗ 1.29 ಲಕ್ಷ ರೂ.



















