ತುಮಕೂರು : ಜಿಲ್ಲೆಯ ತಿಪಟೂರು ನಗರದ ಐಬಿ ಸರ್ಕಲ್‌ನಲ್ಲಿ ಬೆಚ್ಚಿಬೀಳಿಸುವ ಅಪಘಾತ ಸಂಭವಿಸಿದೆ. ನಿಯಂತ್ರಣ ತಪ್ಪಿದ ಲಾರಿಯೊಂದು ಮೊದಲು ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಯುವತಿಗೆ ಡಿಕ್ಕಿ ಹೊಡೆದು, ಬಳಿಕ ವಿದ್ಯುತ್ ಕಂಬಕ್ಕೆ ಗುದ್ದಿದೆ.
ಡಿಕ್ಕಿಯ ರಭಸಕ್ಕೆ ಯುವತಿ ಲಾರಿಯ ಕೆಳಗೆ ಬಿದ್ದಿದ್ದರೂ, ಚಕ್ರದಡಿ ಸಿಲುಕದೇ ಪವಾಡ ಸದೃಶ ರೀತಿಯಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾಳೆ.
ಸ್ಥಳೀಯರು ತಕ್ಷಣ ನೆರವಿಗೆ ಧಾವಿಸಿ ಯುವತಿಯನ್ನು ರಕ್ಷಿಸಿ ಆಸ್ಪತ್ರಗೆ ದಾಖಲಿಸಿದ್ದಾರೆ. ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸರೆಯಾಗಿದ್ದು, ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಇದನ್ನೂ ಓದಿ : ಮಂಡ್ಯದಲ್ಲಿ ಮತ್ತೆ ಪುಡಿ ರೌಡಿಗಳ ಅಟ್ಟಹಾಸ : ಬಸ್ ಅಡ್ಡಗಟ್ಟಿ ಚಾಲಕ-ನಿರ್ವಾಹಕನ ಮೇಲೆ ಹಲ್ಲೆ.. ವಿಡಿಯೋ ವೈರಲ್ !


















