ಉಡುಪಿ : ಅಯೋಧ್ಯೆ ರಾಮಮಂದಿರದಲ್ಲಿನ ಹಗರಣದಿಂದ ಭಕ್ತರ ಭಾವನೆಗೆ ಧಕ್ಕೆಯಾಗಿದ್ದು, ಈ ಬಗ್ಗೆ ಸುಪ್ರೀಂ ಕೋರ್ಟ್‌ನ ಹಾಲಿ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ಉನ್ನತ ಮಟ್ಟದ ತನಿಖೆ ನಡೆಸಿ, ಸತ್ಯವನ್ನು ಬಹಿರಂಗ ಪಡಿಸಿ, ತಪ್ಪಿತಸ್ಥರಿಗೆ ಕಠಿಣ ಕಾನೂನು ಕ್ರಮ ಜರಗಿಸಬೇಕು ಎಂದು ಕೆಪಿಸಿಸಿ ಪ್ರಚಾರ ಸಮಿತಿಯ ರಾಜ್ಯಾಧ್ಯಕ್ಷ, ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಆಗ್ರಹಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಮಮಂದಿರದ ಹುಂಡಿಯಿಂದ ಕೋಟ್ಯಂತರ ರೂ. ಹಣ ಹಾಗೂ ಬೆಳ್ಳಿ ಇಟ್ಟಿಗೆ ಕಳವಾಗಿರುವ ಬಗ್ಗೆ ಆರೋಪಗಳಿವೆ. ಸರ್ಕಾರ ಎಸ್‌ಐಟಿ ತನಿಖೆ ನಡೆಸಿ ಅಮಾಯಕರನ್ನು ಬಂಧಿಸಿದೆ. ಈ ಬಗ್ಗೆ ಮಾಹಿತಿ ಹಕ್ಕು ಕಾಯ್ದೆಯಡಿ ಮಾಹಿತಿ ಪಡೆಯಲು ಕೂಡ ಅವಕಾಶ ಇಲ್ಲದಂತೆ ಮಾಡಲಾಗಿದೆ. ಸಿಸಿಟಿವಿ ದ್ರಶ್ಯಗಳನ್ನು ಕೂಡ ಮರೆ ಮಾಚಲಾಗಿದೆ ಎಂದು ದೂರಿದ್ದಾರೆ.
ಈ ಹಗರಣ ಕೇವಲ ಒಂದು ರಾಜ್ಯಕ್ಕೆ ಸೀಮಿತವಾಗಿಲ್ಲ. ಈ ವಂಚನೆ ಮೂಲಕ ದೇಶದ ಕೋಟ್ಯಂತರ ಭಕ್ತರ ಭಾವನೆಗೆ ನೋವು ಉಂಟಾಗಿದೆ. ಉನ್ನತ ಮಟ್ಟದ ತನಿಖೆಯ ಮೂಲಕ ಸತ್ಯಾಂಶ ಹೊರಬರಬೇಕಾಗಿದೆ. ಈಗಾಗಲೇ ರಾಜೀನಾಮೆ ಕೊಟ್ಟವರು ಒಂದು ಸಂಘಟನೆಗೆ ಸೀಮಿತರಾದ ವರು ಮತ್ತು ಪ್ರಧಾನಿ ಮೋದಿಯ ಆತ್ಮೀಯ ಬಗಳದಲ್ಲಿ ಗುರುತಿಸಿಕೊಂಡವರಾಗಿದ್ದಾರೆ. ಆದುದರಿಂದ ಸುಪ್ರೀಂ ಕೋರ್ಟ್ ಹಾಲಿ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ಈ ಪ್ರಕರಣದ ತನಿಖೆ ನಡೆಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.
ಶ್ರೀ ರಾಮದೇವರನ್ನು ರಾಜಕೀಯಗೊಳಿಸುವ ಕೆಲಸವನ್ನು ಕಾಂಗ್ರೆಸ್ ಎಂದಿಗೂ ಮಾಡಲ್ಲ. ಧರ್ಮ ಮತ್ತು ಭಾವನಾತ್ಮಕ ವಿಚಾರವನ್ನು ನಾವು ರಾಜಕೀಯಗೊಳಿಸಲ್ಲ ಎಂದ ಅವರು, ಮುಂದಿನ ಚುನಾವಣೆಯಲ್ಲೂ ಈ ವಿಚಾರ ದೊಡ್ಡ ಪರಿಣಾಮ ಬೀರಲಿದೆ. ಈ ಪ್ರಕರಣದ ತನಿಖೆಗಾಗಿ ಕಾಂಗ್ರೆಸ್ ಪಕ್ಷದ ಮುಂದೆ ಹೋರಾಟ ನಡೆಸಲಿದೆ ಎಂದು ಹೇಳಿದ್ದಾರೆ.
ಇದನ್ನೂ ಓದಿ : ಜಿಬಿಎ ಚುನಾವಣೆಗೆ ಮತ್ತೆ ವಿಘ್ನ? ಎಲೆಕ್ಷನ್ ಮುಂದೂಡಲು ರಾಜ್ಯ ಸರ್ಕಾರದ ಚಿಂತನೆ!



















