ಬೆಂಗಳೂರು : ಕರ್ನಾಟಕದ ಅಬಕಾರಿ ಇಲಾಖೆಯಲ್ಲಿ ಖಾಲಿ ಇರುವ 1,207 ಹುದ್ದೆಗಳ ನೇಮಕಾತಿಗೆ ಅನುಮೋದನೆ ದೊರೆತಿದೆ. 1,207 ಸಬ್ ಇನ್ಸ್‌ಪೆಕ್ಟರ್ ಹಾಗೂ ಕಾನ್ಸ್‌ಸ್ಟೆಬಲ್ ಹುದ್ದೆಗಳಿಗೆ ಶೀಘ್ರವೇ ಅಧಿಸೂಚನೆ ಹೊರಡಿಸಲಾಗುತ್ತದೆ. ಹಾಗಾಗಿ, ಅರ್ಹ ಹಾಗೂ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಲು ಸಿದ್ಧರಾಗಬೇಕಿದೆ. ಅಗತ್ಯ ದಾಖಲೆಗಳು ಹಾಗೂ ವಿದ್ಯಾರ್ಹತೆ ಕುರಿತ ಮಾಹಿತಿ ಇಲ್ಲಿದೆ.
ಹುದ್ದೆಗಳ ಸಂಕ್ಷಿಪ್ತ ಮಾಹಿತಿ
ನೇಮಕಾತಿ ಸಂಸ್ಥೆ: ಕರ್ನಾಟಕ ಅಬಕಾರಿ ಇಲಾಖೆ
ಒಟ್ಟು ಹುದ್ದೆಗಳು: 1,207
ಹುದ್ದೆಗಳ ಹೆಸರು: ಸಬ್ ಇನ್ಸ್ ಪೆಕ್ಟರ್ ಹಾಗೂ ಕಾನ್ ಸ್ಟೆಬಲ್
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ಶೀಘ್ರವೇ ಅಧಿಸೂಚನೆ ಹೊರಡಿಸಲಾಗುವುದು
942 ಅಬಕಾರಿ ಕಾನ್ ಸ್ಟೆಬಲ್ ಹಾಗೂ 265 ಅಬಕಾರಿ ಇನ್ಸ್ ಪೆಕ್ಟರ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸಲು ಬಯಸುವವರು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿಯಿಂದ ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿ ಮುಗಿಸಿರಬೇಕು. ಕನಿಷ್ಠ 18 ವರ್ಷದಿಂದ 38 ವರ್ಷದೊಳಗಿನವರು ಅರ್ಜಿ ಸಲ್ಲಿಸಲು ಅರ್ಹರು.
2 ಎ, 2 ಬಿ, 3 ಎ, 3 ಬಿ ಅಭ್ಯರ್ಥಿಗಳಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆ ಇರಲಿದೆ. ಒಬಿಸಿಯವರಿಗೆ 3 ವರ್ಷಗಳ ಸಡಿಲಿಕೆ ಅನ್ವಯವಾಗುತ್ತದೆ. ಸ್ಪರ್ಧಾತ್ಮಕ ಪರೀಕ್ಷೆ, ದೈಹಿಕ ಸಾಮರ್ಥ್ಯ ಪರೀಕ್ಷೆ, ವೈದ್ಯಕೀಯ ಪರೀಕ್ಷೆ ಹಾಗೂ ದಾಖಲೆ ಪರಿಶೀಲನೆ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 21,400 – 58,250 ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ. ಅಧಿಸೂಚನೆ ಹೊರಡಿಸುತ್ತಲೇ stateexcise.karnataka.gov.in ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ.
ಇದನ್ನೂ ಓದಿ : ಐಸಿಸಿ ಹಾಲ್ ಆಫ್ ಫೇಮ್‌ಗೆ ಸೌರವ್ ಗಂಗೂಲಿ ಸೇರ್ಪಡೆ – ಭಾರತೀಯ ಕ್ರಿಕೆಟ್‌ಗೆ ಹೊಸ ಗೌರವದ ಅಧ್ಯಾಯ!


















