ಬೆಳಗಾವಿ : ನೀವು ಬೆಳಗಾವಿ ಜಿಲ್ಲೆಯವರಾಗಿದ್ದು, ನಿಮ್ಮ ಜಿಲ್ಲೆಯಲ್ಲಿಯೇ ಉದ್ಯೋಗ ಹುಡುಕುತ್ತಿದ್ದೀರಾ? ನಿಮಗೊಂದು ಸಿಹಿ ಸುದ್ದಿ ಇಲ್ಲಿದೆ. ಬೆಳಗಾವಿಯ ಜಿಲ್ಲಾ ಪಂಚಾಯಿತಿಯಲ್ಲಿ ಖಾಲಿ ಇರುವ 17 ಹುದ್ದೆಗಳ ನೇಮಕಾತಿಗಾಗಿ (Belagavi Zilla Panchayat Recruitment 2026) ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಡಿಸ್ಟ್ರಿಕ್ಟ್ ಮ್ಯಾನೇಜರ್ ಸೇರಿ ಹಲವು ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ನೇಮಕಾತಿಗೆ ಸಂಬಂಧಿಸಿದಂತೆ ಹೆಚ್ಚಿನ ವಿವರ ಇಲ್ಲಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ಜಿಲ್ಲಾ ಪಂಚಾಯಿತಿ, ಬೆಳಗಾವಿ
ಹುದ್ದೆ ಹೆಸರು: ಡಿಸ್ಟ್ರಿಕ್ಟ್ ಮ್ಯಾನೇಜರ್ ಇತ್ಯಾದಿ
ಒಟ್ಟು ಹುದ್ದೆ: 17
ಉದ್ಯೋಗ ಸ್ಥಳ: ಬೆಳಗಾವಿ
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಜುಲೈ 15
ಡಿಸ್ಟ್ರಿಕ್ಟ್ ಪ್ರೋಗ್ರಾಂ ಮ್ಯಾನೇಜರ್, ಡಿಸ್ಟ್ರಿಕ್ಟ್ ಮ್ಯಾನೇಜರ್, ಕ್ಲಸ್ಟರ್ ಸೂಪರ್ ವೈಸರ್, ಬ್ಲಾಕ್ ಮ್ಯಾನೇಜರ್ ಸೇರಿ ಹಲವು ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಿಂದ ಬಿಎಸ್ಸಿ, ಎಂಎಸ್ಸಿ, ಎಂಬಿಎ,ಎಂಎಸ್ ಡಬ್ಲ್ಯೂ ಕೋರ್ಸ್ ಗಳನ್ನು ಮುಗಿಸಿದವರು ಅರ್ಜಿಗಳನ್ನು ಸಲ್ಲಿಸಹುದಾಗಿದೆ. ಅರ್ಜಿ ಸಲ್ಲಿಸಲು ಯಾವುದೇ ಶುಲ್ಕ ಇರುವುದಿಲ್ಲ. ಸಲ್ಲಿಕೆಯಾದ ಅರ್ಜಿಗಳನ್ನು ಮೊದಲು ಪರಿಶೀಲನೆ ನಡೆಸಲಾಗುತ್ತದೆ. ನಂತರ ಸಂದರ್ಶನಕ್ಕೆ ಆಹ್ವಾನಿಸಿ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸುವವರಿಗೆ ಗರಿಷ್ಠ 45 ವರ್ಷಗಳ ವಯೋಮಿತಿ ನಿಗದಿಪಡಿಸಲಾಗಿದೆ.
ಅರ್ಜಿ ಸಲ್ಲಿಸೋದು ಹೇಗೆ?
ಮೊದಲಿಗೆ ಅಧಿಕೃತ ವೆಬ್ ಸೈಟ್ ಆಗಿರುವ zpbelagavi.karnataka.gov.in ಗೆ ಭೇಟಿ ನೀಡಬೇಕು.
ನಿಮಗೆ ಬೇಕಾದ ಹುದ್ದೆಯ ವಿಭಾಗವನ್ನು ಆಯ್ಕೆ ಮಾಡಬೇಕು.
ಹುದ್ದೆಯ ಅಧಿಸೂಚನೆ ಓದಬೇಕು
ಅರ್ಜಿಯ ಪ್ರಿಂಟೌಟ್ ತೆಗದುಕೊಂಡು ಭರ್ತಿ ಮಾಡಬೇಕು
ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಬೇಕು
ಫ್ಯೂಚರ್ ರೆಫರೆನ್ಸಿಗಾಗಿ ಅರ್ಜಿ ನಮೂನೆಯ ಪ್ರಿಂಟೌಟ್ ತೆಗೆದುಕೊಳ್ಳಬೇಕು
ಇದನ್ನೂ ಓದಿ : ರಾಜ್ಯ ಅಬಕಾರಿ ಇಲಾಖೆಯಲ್ಲಿ 1,207 ಹುದ್ದೆಗಳ ನೇಮಕಾತಿ : 58 ಸಾವಿರ ರೂ. ಸಂಬಳ



















