ಬೆಂಗಳೂರು : ಸಿಎಸ್‌ಸಿ ಇ-ಗವರ್ನನ್ಸ್ ಸರ್ವಿಸಸ್ ಇಂಡಿಯಾ ಲಿಮಿಟೆಡ್ ಸಂಸ್ಥೆಯು ದೇಶಾದ್ಯಂತ ಇರುವ ಆಧಾರ್ ಸೇವಾ ಕೇಂದ್ರಗಳಲ್ಲಿ 316 ಆಧಾರ್ ಸೂಪರ್ ವೈಸರ್ ಹುದ್ದೆಗಳ ನೇಮಕಾತಿಗಾಗಿ (Aadhaar Supervisor Recruitment 2026) ಅಧಿಸೂಚನೆ ಹೊರಡಿಸಿದೆ. ಒಟ್ಟು 316 ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ನೇಮಕಾತಿಗೆ ಸಂಬಂಧಿಸಿದ ಸಂಪೂರ್ಣ ಮಾಹಿತಿ ಹೀಗಿದೆ ನೋಡಿ.
ಹುದ್ದೆಗಳ ವಿವರ
- ನೇಮಕಾತಿ ಸಂಸ್ಥೆ : ಸಿಎಸ್ ಸಿ ಇ-ಗವರ್ನನ್ಸ್ ಸರ್ವಿಸಸ್ ಇಂಡಿಯಾ ಲಿಮಿಟೆಡ್
- ಹುದ್ದೆಗಳು: 316
- ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
- ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ಆಗಸ್ಟ್ 20
- ಉದ್ಯೋಗ ಸ್ಥಳ: ಕರ್ನಾಟಕ ಸೇರಿ ದೇಶಾದ್ಯಂತ
ಪಿಯುಸಿ, ಐಟಿಐ ಹಾಗೂ ಡಿಪ್ಲೋಮಾ ಕೋರ್ಸ್ ಗಳನ್ನು ಮುಗಿಸಿದವರು ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ. ಕರ್ನಾಟಕ, ಛತ್ತೀಸ್ ಗಢ ಸೇರಿ 7 ರಾಜ್ಯಗಳ ಜಿಲ್ಲೆಗಳಲ್ಲಿರುವ ಆಧಾರ್ ಸೇವಾ ಕೇಂದ್ರಗಳಲ್ಲಿ ನೇಮಕಾತಿ ನಡೆಯುತ್ತಿದೆ. ಕರ್ನಾಟಕದ ಎಲ್ಲ ಜಿಲ್ಲೆಗಳಲ್ಲಿ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಕನಿಷ್ಠ 18 ವರ್ಷ ದಾಟಿದವರು ಅರ್ಜಿ ಸಲ್ಲಿಸಬಹುದು.
ಒಂದು ವರ್ಷದ ಅವಧಿಗೆ ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವನ್ನು ವಿಧಿಸುವುದಿಲ್ಲ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಆಸಕ್ತಿ ಇರುವ ಅಭ್ಯರ್ಥಿಗಳು csc.gov.in ವೆಬ್ ಸೈಟ್ ಗೆ ಭೇಟಿ ನೀಡಿ, ಅಧಿಸೂಚನೆಯನ್ನು ಓದಿ, ಅರ್ಜಿ ನಮೂನೆಯನ್ನು ಡೌನ್ ಲೋಡ್ ಮಾಡಿಕೊಳ್ಳಬಹುದು. ಇದಾದ ಬಳಿಕ ಅಗತ್ಯ ದಾಖಲೆಗಳೊಂದಿಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಇದನ್ನೂ ಓದಿ : 500 ರೂ. ಖೋಟಾ ನೋಟ್ ಕೊಟ್ಟು ಸಿಗರೇಟ್ ಖರೀದಿಸಿದ ಖದೀಮ ಅರೆಸ್ಟ್!



















