ಗದಗ : ಜಿಲ್ಲೆಯಲ್ಲಿ ಬಡ್ಡಿ ದಂಧೆಕೋರರ ಕಿರುಕುಳಕ್ಕೆ ಮತ್ತೊಂದು ಜೀವ ಬಲಿಯಾದ ಘಟನೆ ಬೆಳಕಿಗೆ ಬಂದದೆ. ನಗರದ ಕರೆಮ್ಮಕಲ್ಲ್ ಬಡಾವಣೆಯ ನಿವಾಸಿ ಸಂಪತ್ ದಂಡಗಿ (38) ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ಬೆಟಗೇರಿ ಬಡಾವಣೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಸಂಪತ್‌ಗೆ ಬಡ್ಡಿ ದಂಧೆಕೋರರು ಹಣ ಮತ್ತು ಬಡ್ಡಿ ವಸೂಲಿಗಾಗಿ ನಿರಂತರವಾಗಿ ಫೋನ್ ಮಾಡಿ ಕಿರುಕುಳ ನೀಡುತ್ತಿದ್ದರು ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಧರ್ಮಗೌಡ ಎಂಬಾತ ಪ್ರತಿದಿನ ಕರೆ ಮಾಡಿ ಬೆದರಿಕೆ ಹಾಕುತ್ತಿದ್ದ ಎಂದು ಮೃತನ ಪತ್ನಿ ಸ್ನೇಹಾ ಆರೋಪಿಸಿದ್ದಾರೆ.
ಈ ನಿರಂತರ ಕಿರುಕುಳ ಮತ್ತು ಬೆದರಿಕೆಯಿಂದ ಮಾನಸಿಕವಾಗಿ ನೊಂದಿದ್ದ ಸಂಪತ್, ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕುಟುಂಬಸ್ಥರು ಕಣ್ಣೀರಿಡುತ್ತಿದ್ದಾರೆ.
ಇನ್ನು ಸಂಪತ್ ಕುಟುಂಬಸ್ಥರು ಬಡ್ಡಿ ದಂಧೆಕೋರರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ. ಘಟನೆ ಸಂಬಂಧ ಬೆಟಗೇರಿ ಬಡಾವಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಗಳ ಕುರಿತು ತನಿಖೆ ಮುಂದುವರಿಸಿದ್ದಾರೆ.
ಇದನ್ನೂ ಓದಿ : ಮೇಲೆ ಹಾಸ್ಟೆಲ್, ಕೆಳಗೆ ಬಾರ್ ; ಬೆಂಗಳೂರಲ್ಲಿ ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟ!



















